ರಾಯಚೂರು: ಜಿಲ್ಲಾಡಳಿತದಿಂದ ಮಾರ್ಚ್ 31ದಂದು ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾವೀರ ಜಯಂತಿ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಮಹಾವೀರ ಅವರ ಭಾವಚಿತ್ರಕ್ಕೆ ಪುಷ್ಪಹಾರ ಸಮರ್ಪಣೆ, ಪುಷ್ಪ ನಮನ ಸಲ್ಲಿಸಿದ ಬಳಿಕ ಬೆಳಿಗ್ಗೆ 8.30ಕ್ಕೆ ನಗರದ ಜೈನ್ ಮಂದಿರದಿಂದ ಮೆರವಣಿಗೆ ಹೊರಟು ತೀನ್ ಕಂದಿಲ್, ಮಹಾವೀರ ವೃತ್ತದ ಮಾರ್ಗವಾಗಿ ಜೈನ್ ಮಂದಿರಕ್ಕೆ ಬಂದು ಸೇರಲಿದೆ ಎಂದು ತಿಳಿಸಿದರು.

‘ಬೆಳಿಗ್ಗೆ 11ಕ್ಕೆ ಜೈನ್ ಮಂದಿರದ ಆರಾಧನ ಸಭಾ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಅಧಿಕಾರಿಗಳು ಸಿದ್ಧತೆ ಕೈಗೊಳ್ಳಬೇಕು ಎಂದು ಸೂಚಿಸಿದರು. ಮಹಾವೀರ ವೃತ್ತವನ್ನು ವಿದ್ಯುತ್ ದೀಪಾಲಂಕಾರ ಮಾಡಬೇಕು. ಕುಡಿಯುವ ನೀರು, ರಥದ ಸಿದ್ಧತೆ ಹಾಗೂ ಜೈನ್ ಮಂದಿರ ಸುತ್ತ-ಮುತ್ತ ವ್ಯವಸ್ಥೆಗಳನ್ನು ರಾಯಚೂರು ಮಹಾನಗರ ಪಾಲಿಕೆಯ ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ ಸ್ವಾಗತಿಸಿದರು. ಮಹಾವೀರ ಹಾರದಾರ, ಅಶೋಕ ಲೋದಾ, ಎಸ್.ಎಸ್.ಜೈನ್ ಸಾವ್, ಗೌತಮಿ ಗಿಯ್, ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-32-1109991498

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.