ಸಿರವಾರ: ತಾಲ್ಲೂಕಿನ ಮಲ್ಲಟ ರೈತ ಸಂಪರ್ಕ ಕೇಂದ್ರದಲ್ಲಿ ಮುಂಗಾರು ಹಂಗಾಮಿಗಾಗಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆಗೆ ಮಂಗಳವಾರ ಚಾಲನೆ ನೀಡಲಾಯಿತು.

ಬೀಜ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ಆರೋಲಿ, ‘ಮುಂಗಾರು ಹಂಗಾಮಿನ ಬಿತ್ತನೆಗೆ ರೈತರಿಗೆ ಅನುಕೂಲ ಕಲ್ಪಿಸಲು ಸರ್ಕಾರದಿಂದ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಬೀಜ ವಿತರಿಸಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

‘ಮಳೆ ಆರಂಭವಾಗಿದ್ದು, ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಇಲಾಖೆಯಿಂದ ಸಮಯಕ್ಕೆ ಸರಿಯಾಗಿ ಬೀಜ, ಗೊಬ್ಬರ ಪೂರೈಕೆಗೆ ಕ್ರಮ ವಹಿಸಲಾಗಿದೆ. ರೈತರು ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು’ ಎಂದು ತಿಳಿಸಿದರು.

ರೈತ ಸಂಪರ್ಕ ಕೇಂದ್ರದ ತಾಂತ್ರಿಕ ವ್ಯವಸ್ಥಾಪಕ ನಾಗರಾಜ, ಸಿಬ್ಬಂದಿ ಆಂಜನೇಯ, ಸುನೀಲ, ಬುಡ್ಡಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈತರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-32-60923577

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.