ಮಾನ್ವಿ: ತಾಲ್ಲೂಕಿನ ಬ್ಯಾಗವಾಟ ಗ್ರಾಮದ 2ನೇ ವಾರ್ಡ್ನ ಅಂಬೇಡ್ಕರ್ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ತೊಂದರೆ ಅನುಭವಿಸುವಂತಾಗಿದೆ ಎಂದು ವಾರ್ಡ್ ನಿವಾಸಿಗಳು ತಿಳಿಸಿದ್ದಾರೆ.

ಗ್ರಾಮದ ಇತರ ಎಲ್ಲಾ ವಾರ್ಡ್ಗಳಿಗೆ ಸಮರ್ಪಕವಾಗಿ ಕುಡಿ ಯುವ ನೀರು ಪೂರೈಸಲಾಗುತ್ತಿದೆ. ಆದರೆ, ಅಂಬೇಡ್ಕರ್ ನಗರಕ್ಕೆ ಮಾತ್ರ ಸಮರ್ಪಕವಾಗಿ ನೀರು ಪೂರೈಸುವಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಫಲರಾಗಿದ್ದಾರೆ. ಸಮಸ್ಯೆ ಕುರಿತು ಗಮನಕ್ಕೆ ತಂದರೂ ನಿರ್ಲಕ್ಷ್ಯ ತೋರಿದ್ದಾರೆ ಎಂದು ವಾರ್ಡ್ ನಿವಾಸಿ ಮಲ್ಲಮ್ಮ ಹಾಗೂ ಇತರ ನಿವಾಸಿಗಳು ದೂರಿದ್ದಾರೆ.

ಭರವಸೆ: ‘ಬ್ಯಾಗವಾಟ ಗ್ರಾಮದ ಅಂಬೇಡ್ಕರ್ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರತಿ ದಿನ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಸಿಬ್ಬಂದಿಗೆ ಸೂಚಿಸಲಾಗುವುದು’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಕುಮಾರ ಶುಕ್ರವಾರ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-32-915745723

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.