ಮಾನ್ವಿ: ಮಾಜಿ ಶಾಸಕ ಗಂಗಾಧರ ನಾಯಕ ನೇತೃತ್ವದಲ್ಲಿ ತಾಲ್ಲೂಕಿನ ಬಿಜೆಪಿ ಮುಖಂಡರು ಮಂಗಳವಾರ ರಾಯಚೂರಿನಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ. ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪಟ್ಟಣದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಸೇರಿದಂತೆ ವಿವಿಧ ಮೂಲಸೌಕರ್ಯ ಒದಗಿಸಲು ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವರು ಒತ್ತಾಯಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿನ ಕಸವನ್ನು ನಿಯಮಿತವಾಗಿ ವಿಲೇವಾರಿ ಮಾಡಬೇಕು. ಎಲ್ಲಾ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಶುದ್ಧ ಕುಡಿಯುವ ನೀರಿನ ಅನಧಿಕೃತ ಘಟಕಗಳ ಮೇಲೆ ಕ್ರಮ ಕೈಗೊಳ್ಳಬೇಕು. ಪಟ್ಟಣದ ಬಸ್ ನಿಲ್ದಾಣ ಹತ್ತಿರದ ಮುಖ್ಯರಸ್ತೆಯಲ್ಲಿನ ತರಕಾರಿ ,ತಳ್ಳುಬಂಡಿ ವ್ಯಾಪಾರಿಗಳನ್ನು ಸ್ಥಳಾಂತರಿಸಬೇಕು, ಪುರಸಭೆಯಿಂದ ಪಟ್ಟಣಕ್ಕೆ ನೀರು ಪೂರೈಸುವ ಪಂಪಾ ಉದ್ಯಾನದಲ್ಲಿರುವ ಜನರೇಟರ್ ದುರಸ್ಥಿಗೊಳಿಸಬೇಕು. ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಬೇಕು. ರಾಜ್ಯ ಹೆದ್ದಾರಿ ಪಕ್ಕದ ಮಾಂಸದ ಅಂಗಡಿಗಳನ್ನು ಸ್ಥಳಾಂತರಿಸಬೇಕು. ಘನತ್ಯಾಜ್ಯ ವಿಲೇವಾರಿ ಘಟಕವನ್ನು ಕಳಪೆಯಾಗಿ ನಿರ್ಮಿಸಲಾಗಿದು ಸೂಕ್ತ ತನಿಖೆಯನ್ನು ನಡೆಸಬೇಕು. ನಗರೋತ್ಥಾನ ಯೋಜನೆಯಡಿ ಪಟ್ಟಣದಲ್ಲಿನ ರಾಜ ಕಾಲುವೆಗಳ ನಿರ್ಮಾಣ ಮಾಡಬೇಕು. ಆರ್.ಜಿ.ಕ್ಯಾಂಪ್ ರಸ್ತೆಯ ಕಾಲುವೆಗೆ ಸಮರ್ಪಕ ಸೇತುವೆ ನಿರ್ಮಾಣ ಮಾಡಬೇಕು. ಜಯನಗರ, ವಿಜಯನಗರ, ಬಿಜಲಿ ಲೇಔಟ್, ವಿನಾಯಕ ನಗರ ಸೇರಿದಂತೆ ವಿವಿಧ ವಾರ್ಡಗಳಲ್ಲಿ ರಸ್ತೆ, ಚರಂಡಿ, ಬೀದಿ ದೀಪಗಳ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ದೊರೆಬಾಬು, ಮಾಜಿ ಮಂಡಲ ಅಧ್ಯಕ್ಷ ಜೆ.ಸುಧಾಕರ, ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ತಿಮ್ಮಾರೆಡ್ಡಿ ಭೋಗಾವತಿ ಇತರ ಪದಾಧಿಕಾರಿಗಳಾದ ಶರಣಪ್ಪಗೌಡ ನಕ್ಕುಂದಿ, ವಿಶ್ವನಾಥ ರಾಯಪ್ಪ, ಎಂ ಶ್ರೀನಿವಾಸ್, ರವಿಕುಮಾರ ಸಾಹುಕಾರ, ಶಿವಕುಮಾರ್, ಶರಣಯ್ಯ ಸ್ವಾಮಿ, ಜಗದೀಶ ಓತೂರ, ಚನ್ನಬಸವ ಜಾನೆಕಲ್, ಕೆ ಶಿವಕುಮಾರ, ವೀರೇಶ ಯಾದವ, ಬಸವ ಪ್ರಭು ಕರಡಿಗುಡ್ಡ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-32-1757606117

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.