ಮಸ್ಕಿ: ‘ಮೇ28ರಂದು ನಡೆಯುವ ಬಕ್ರಿದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆಯಿಂದ ಆಚರಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಸಹಕಾರ ನೀಡಬೇಕು’ ಎಂದು ಲಿಂಗಸುಗೂರು ಡಿಎಸ್ಪಿ ದತ್ತಾತ್ರೇಯ ಕರ್ನಾಡ್ ಕರೆ ನೀಡಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬಕ್ರಿದ್ ನಿಮಿತ್ತ ಶನಿವಾರ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು ಮಸ್ಕಿ ಪಟ್ಟಣದ ಶಾಂತಿ ಸುವ್ಯವಸ್ಥೆಗೆ ಹೆಸರಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲರೂ ಕೂಡಿಕೂಡಿಕೊಂಡು ಹಬ್ಬದ ಯಶಸ್ವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಮುಸ್ಲಿಂ ಸಮಾಜದ ಬಂಧುಗಳು ಪ್ರಾರ್ಥನೆ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಪುರಸಭೆಯಿಂದ ಸ್ವಚ್ಚತೆ ಮಾಡಲು ಸೂಚಿಸಲಾಗುವುದು ಎಂದು ತಿಳಿಸಿದರು.

ಸಿಪಿಐ ರಾಮಣ್ಣ ಜೆ. ಪಿಎಸ್ಐ ರಂಗಯ್ಯ ಕೆ. ಸೇರಿದಂತೆ ಹಿಂದೂ ಮುಸ್ಲಿಂ ಸಮಾಜದ ಅನೇಕ ಮುಖಂಡರು. ಪುರಸಭೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-32-1802708483

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.