ಮಸ್ಕಿ: ‘ಪಟ್ಟಣದಲ್ಲಿ ಡಾ.ಅಂಬೇಡ್ಕರ್ ಭವನ, ಕನಕ ಭವನದ ಮುಂದುವರಿದ ಕಾಮಗಾರಿ ಹಾಗೂ ವಿಶ್ವಕರ್ಮ ಸಮಾಜದ ಕಾಳಿಕಾದೇವಿ ಸಮುದಾಯ ಭವನದ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಒಟ್ಟು ₹ 2.38 ಕೋಟಿ ಅನುದಾನದಲ್ಲಿ ಕಾಮಗಾರಿಗಳು ಶೀಘ್ರ ಆರಂಭವಾಗಲಿವೆ’ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಡಾ.ಅಂಬೇಡ್ಕರ್ ಭವನ, ಕನಕ ಭವನ ಹಾಗೂ ಕಾಳಿಕಾದೇವಿ ದೇವಸ್ಥಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ‘ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಡಾ. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹ 1.18 ಕೋಟಿ, ಕಾಳಿಕಾದೇವಿ ಸಮುದಾಯ ಭವನ ನಿರ್ಮಾಣಕ್ಕೆ ₹20 ಲಕ್ಷ ಅನುದಾನ ಮಂಜೂರಾಗಿದೆ. ಹಿಂದುಳಿದ ವರ್ಗಗಳ ಇಲಾಖೆಯಿಂದ ಕನಕ ಭವನದ ಮುಂದುವರಿದ ಕಾಮಗಾರಿಗೆ ₹ 1 ಕೋಟಿ ನೀಡಲಾಗಿದ್ದು, ಗುಣಮಟ್ಟದ ಕಟ್ಟಡ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು. ‘ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿಗಿದೆ. ಅಶೋಕ ವೃತ್ತದದಿಂದ ಮುದಗಲ್ ರಸ್ತೆಯಲ್ಲಿ ಡಿವೈಡರ್ ರಸ್ತೆ ಹಾಗೂ ಹೈಮಾಸ್ಟ್ ದೀಪಗಳ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹1.80 ಕೋಟಿ ಅನುದಾನ ನೀಡಿದ್ದು, ಒಂದೆರಡು ದಿನಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಟೆಂಡರ್ ಕರೆಯಲಾಗುತ್ತದೆ. ಅಶೋಕ ವೃತ್ತದಲ್ಲಿ ₹50 ಲಕ್ಷ ವೆಚ್ಚದಲ್ಲಿ ಬೃಹತ್ ಅಶೋಕ ಸ್ತಂಭ ನಿರ್ಮಾಣದ ಕಾರ್ಯ ಶೀಘ್ರ ಆರಂಭವಾಗಲಿದೆ. ಈಗಾಗಲೇ ವಾಲ್ಮೀಕಿ ವೃತ್ತದಿಂದ ಬಳಗಾನೂರು ರಸ್ತೆ ₹80 ಲಕ್ಷ ವೆಚ್ಚದಲ್ಲಿ ಡಿವೈಡರ್ ರಸ್ತೆ ಹಾಗೂ ಹೈಮಾಸ್ಟ್ ಬೀದಿ ದೀಪಗಳನ್ನು ಅಳವಡಿಸಲಾಗಿದೆ’ ಎಂದು ಹೇಳಿದರು.

ಪುರಸಭೆ ಅಧ್ಯಕ್ಷ ಸುರೇಶ ಹರಸೂರು, ಮುಖ್ಯಾಧಿಕಾರಿ ನರಸರೆಡ್ಡಿ, ಕಂಪನಿ ಎಂಜನಿಯರ್ ಮಹ್ಮದ್ ಕೌಸರ್ ಸೇರಿದಂತೆ ಪುರಸಭೆ ಸದಸ್ಯರು, ಮುಖಂಡರು, ಕಾಂಗ್ರೆಸ್ ಪದಾಧಿಕಾರಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-32-950799634

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.