ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮನ್ವಯದಿಂದ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಡಿಸಿ

Last Updated 4 ಸೆಪ್ಟೆಂಬರ್ 2021, 13:48 IST
ಅಕ್ಷರ ಗಾತ್ರ

ರಾಯಚೂರು: ನಗರದ ಅಸ್ಕಿಹಾಳ್‌ ಮೂಲಕ ಪವರ್ ಗ್ರೇಡ್‌ಗೆ ನೀರು ಸಂಪರ್ಕ ಪೈಪ್‌ಲೈನ್ ಕಾಮಗಾರಿ ಖಾಸಗಿಭೂಮಾಲೀಕರ ತಡೆ ನೀಡಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದವರೊಂದಿಗ ಚರ್ಚಿಸಿ ಕೂಡಲೇ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಯಚೂರು ನಗರಸಭೆಯ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಯಚೂರು ನಗರದ ಅಶೋಕ ರಸ್ತೆ, ಟಿಪ್ಪು ಸುಲ್ತಾನ್ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ 60 ಅಡಿ ರಸ್ತೆ ಅಗಲೀಕರಣದ ಪ್ರಕ್ರಿಯೆಗಳನ್ನು ಮನೆಗಳ ಮಾಲೀಕರೊಂದಿಗೆ ಸಮನ್ವಯ ಸಭೆನಡೆಸಿ ರಸ್ತೆ ಅಗಲೀಕರಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರ ಈಗಾಗಲೇ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧ ಮಾಡಿದ್ದು, ಜಿಲ್ಲೆಯಲ್ಲಿ ಸಂಪೂರ್ಣ ಅನುಷ್ಠಾನ ಮಾಡಬೇಕಾಗಿದೆ. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧಕ್ಕೆ ಸಂಬಂಧಿಸಿದಂತೆ ಜಾಗೃತಿ ಅಭಿಯಾನದಲ್ಲಿ ಜನಪ್ರತಿನಿಧಿಗಳನ್ನು ಸಮ್ಮುಖದಲ್ಲಿ ಕರಪತ್ರ ಹಂಚುವ ಮೂಲಕ ಪ್ಲಾಸ್ಟಿಕ್ ಬಳಕೆಗೆ ಬ್ರೇಕ್ ಹಾಕಬೇಕು ಎಂದರು.

ದೇವಸ್ಥಾನಕ್ಕೆ ಭಕ್ತರು ಹೂ, ಕಾಯಿ, ಹಣ್ಣುಗಳನ್ನು ಪ್ಲಾಸ್ಟಿಕ್‌ ಚೀಲದಲ್ಲಿ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ದೇವಸ್ಥಾನದಲ್ಲಿ ಮತ್ತು ಅಕ್ಕಪಕ್ಕದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಿ, ಪ್ಲಾಸ್ಟಿಕ್ ಚೀಲ ಬದಲು ಬಿದಿರಿನ ಪುಟ್ಟಿಗಳು ತರಲು ಉತ್ತೇಜನ ನೀಡಬೇಕು ಎಂದು ಹೇಳಿದರು.

ರಾಯಚೂರು ನಗರದ ಕಸ ಸಂಗ್ರಹಣೆಗೆ ಸಂಬಂಧಿಸಿದ ತಳ್ಳು ಗಾಡಿಗಳು ಮತ್ತು ವಾಹನಗಳ ರಿಪೇರಿ ಮತ್ತು ಖರೀದಿಗೆ 15ನೇ ಹಣಕಾಸಿನಲ್ಲಿನ ಹಣ ಬಳಕೆ ಮಾಡಲು ನಗರಸಭೆ ಪೌರಾಯುಕ್ತ ಕೆ. ಮುನಿಸ್ವಾಮಿ ಅವರಿಗೆ ಸೂಚನೆ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶ ವ್ಯವಸ್ಥಾಪಕ ಮಹೇಂದ್ರ, ನಗರಸಭೆ ಎಇಇ ವೆಂಕಟೇಶ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT