ರಾಯಚೂರು: ‘ಅಲ್ಪಸಂಖ್ಯಾತರು ಹೊರ ರಾಷ್ಟ್ರಗಳಲ್ಲಿನ ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ವ್ಯಾಪಾರದ ಪ್ರಗತಿಯನ್ನು ಅವಲೋಕಿಸಿಕೊಂಡು ಮುನ್ನಡೆಯಬೇಕು’ ಎಂದು ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ಇಲ್ಲಿಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಅಂಜುಮನ್-ಎ– ರಾಯಚೂರು ಸಂಸ್ಥೆ ಆಯೋಜಿಸಿದ್ದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸನ್ಮಾನ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ನಮ್ಮ ಸರ್ಕಾರ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಮೊದಲನೇ ವರ್ಷದಲ್ಲಿ ₹4 ಸಾವಿರ ಕೋಟಿ, ಎರಡನೇ ವರ್ಷದಲ್ಲಿ ₹5 ಸಾವಿರ ಕೋಟಿ ಮತ್ತು ಪ್ರಸಕ್ತ ಸಾಲಿನಲ್ಲಿ ₹6.5 ಸಾವಿರ ಕೋಟಿ ಅನುದಾನ ನೀಡಿದೆ. ಜೊತೆಗೆ 150 ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆಗಳಿಗೆ ಮಂಜೂರಾತಿ ನೀಡಿದೆ’ ಎಂದು ತಿಳಿಸಿದರು.

‘ರಾಜ್ಯ ಸರ್ಕಾರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಿದೆ ಹಾಗೂ ನೂರಾರು ವಸತಿ ನಿಲಯಗಳನ್ನು ಸರ್ಕಾರ ಮಂಜೂರು ಮಾಡಿದೆ. ಸರ್ಕಾರ ಅಲ್ಪಸಂಖ್ಯಾತರ ಪ್ರಗತಿಗಾಗಿ ಇಷ್ಟೆಲ್ಲಾ ಸೌಕರ್ಯ ಒದಗಿಸುತ್ತಿದ್ದರೂ, ತೃಪ್ತಿಕರವಾದ ಅಭಿವೃದ್ಧಿ ಆಗಿಲ್ಲ. ಈ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಿದೆ’ ಎಂದು ತಿಳಿಸಿದರು.

‘ವೈವಿಧ್ಯತೆಯ ಜೊತೆಗೆ ಭಾವೈಕ್ಯದಿಂದ ಕೂಡಿದ ದೇಶ ನಮ್ಮದಾಗಿದೆ. ಆದರೆ, ಇತ್ತೀಚಿಗೆ ಕೆಲವರು ಧಾರ್ಮಿಕ ಭಾವನೆಗಳನ್ನ ಕೆರಳಿಸುವ ಕೆಲಸ ಮಾಡುತ್ತಿದ್ದಾರೆ. ಇಂಥವರಿಂದ ಬಗ್ಗೆ ಎಚ್ಚರಿಕೆ ವಹಿಸಬೇಕು’ ಎಂದು ಹೇಳಿದರು. ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅವಿರತ ಶ್ರಮದ ಫಲವಾಗಿ ಸಂವಿಧಾನದ 371 ಜೆ ಕಲಂ ತಿದ್ದುಪಡಿಯಾಗಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಹಿಂದಿನ ಸರ್ಕಾರದಲ್ಲಿ ಸಮಗ್ರ ಕಾನೂನು ರೂಪಿಸಿಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಮತ್ತು ಔದ್ಯೋಗಿಕ ಬೆಳವಣಿಗೆಗೆ ಇಬ್ಬರು ನಾಯಕರು ಕಾರಣರಾಗಿದ್ದಾರೆ’ ಎಂದು ಅಭಿಪ್ರಾಯಪಟ್ಟರು.

‘ಕಲ್ಯಾಣ ಕರ್ನಾಟಕ ಭಾಗ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಇದಕ್ಕೆ ಕಾರಣ ಹುಡುಕದೆ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನ ಸದುಪಯೋಗ ಪಡಿಸಿಕೊಂಡು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳು ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.

ಪ್ರಾಧ್ಯಾಪಕ ಸೈಯದ್ ಮಿನ್ಹಾಜುಲ್ ಹಸನ್ ಮಾತನಾಡಿ, ‘ವಿದ್ಯಾರ್ಥಿಗಳು ತಂದೆ ತಾಯಿಗಳಿಗೆ ವಿಧೇಯರಾಗಿರಬೇಕು. ಶಿಕ್ಷಕರ ಮಾತನ್ನು ಕೇಳಬೇಕು. ಉನ್ನತ ಶಿಕ್ಷಣ ಪಡೆಯುವಲ್ಲಿ ಯಾವುದೇ ಕಾರಣಕ್ಕೂ ಹಿಂಜರಿಯಬಾರದು. ಉನ್ನತ ಶಿಕ್ಷಣಕ್ಕೆ ಬೇರೆ ಊರಿಗೆ ಹೋಗುವಾಗ ಕೀಳರಿಮೆ ಇಟ್ಟುಕೊಳ್ಳಬಾರದು. ನೀವು ಯಾರಿಗೂ ಕಡಿಮೆ ಇಲ್ಲ ಎನ್ನುವ ಭಾವನೆ ಬೆಳೆಸಿಕೊಂಡು ಅಧ್ಯಯನ ಮಾಡಬೇಕು’ ಎಂದು ಹೇಳಿದರು.

ಅಂಜುಮಾನ–ಎ–ರಾಯಚೂರು ಸಂಸ್ಥೆಯ ಸಂಚಾಲಕ ಹ್ಯಾರಿಸ್ ಸಿದ್ದಿಖಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹತ್ತನೇ ತರಗತಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸತ್ಕರಿಸಿ, ಗೌರವಿಸಲಾಯಿತು. ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಅಂಜುಮನ್ ಸಂಸ್ಥೆ ಮುಖಂಡರಾದ ರಝಾಕ್ ಉಸ್ತಾದ್, ಅಬ್ದುಲ್ ಕರೀಂ, ಕೆ.ಅಸ್ಲಾಂ ಪಾಷಾ, ಮೌಲಾನಾ ಸೈಯದ್ ಅಬ್ದುಲ್ ಲತೀಫ್ ಲೌಬಲಿ ಸಾಹೇಬ್, ಸೈಯದ್ ತಾರೀಖ ಹಸನ್ ರಿಜ್ವಿ ವಕೀಲ, ಸೈಯದ್ ಅಮೀನುಲ್ ಹಸನ್, ಶೇಖ ಮೆಹಬೂಬ, ಸೈಯದ್ ಜುಬೇರ್ ಮೋಹಿಯುದ್ದೀನ್, ಡಾ.ಬಂದಾ ನವಾಜ್, ರಹಮತ್ ಬೇಗ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-32-2015476641

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.