ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೂರು ಸ್ಥಾನಗಳು ಕಾಂಗ್ರೆಸ್‌ ಪಾಲು

Published 30 ಡಿಸೆಂಬರ್ 2023, 6:52 IST
Last Updated 30 ಡಿಸೆಂಬರ್ 2023, 6:52 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ನಗರಸಭೆ, ಸಿಂಧನೂರು ನಗರಸಭೆ ಹಾಗೂ ದೇವದುರ್ಗ ಪುರಸಭೆಯ ತಲಾ ಒಂದೊಂದು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.

ಜೆಡಿಎಸ್‌ ಅಭ್ಯರ್ಥಿಗಳ ಮಧ್ಯೆಯೇ ನೇರ ಸ್ಪರ್ಧೆ ನಡೆದಿದೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಪಟ್ಟಿದೆ.

ರಾಯಚೂರು ನಗರಸಭೆಯ ವಾರ್ಡ್ ನಂಬರ್ 12ಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ.ಪವನ್ ಕುಮಾರ ಭಾರಿ ಬಹುಮತದಿಂದ ಗೆಲುವಿನ ನಗೆ ಬೀರಿದ್ದಾರೆ.

ಪವನ್ ಕುಮಾರ 2,627 ಮತಗಳನ್ನು ಪಡೆದಿದ್ದು, ಪ್ರತಿ ಸ್ಪರ್ಧಿಗಳಾದ ಜೆಡಿಎಸ್ ಅಭ್ಯರ್ಥಿ ಮೀರ್ ಅಬ್ದುಲ್ ರಹೀಂ 359 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿ ನೂರ್ ಪಾಷಾ 140 ಮತಗಳನ್ನು ಪಡೆದಿದ್ದಾರೆ. ಉಳಿದಂತೆ 18 ಮತಗಳು ನೋಟಾಗೆ ಚಲಾವಣೆಯಾಗಿದೆ.

ವಾರ್ಡ್ ನಂಬರ್ 12ರ ಮಂಗಳವಾರಪೇಟೆಯ ಸದಸ್ಯರಾಗಿ, ನಗರಸಭೆಯ ಅಧ್ಯಕ್ಷರೂ ಆಗಿದ್ದ ವಿನಯಕುಮಾರ ಅವರು ವಿಧಾನಸಭಾ ಚುನಾವಣೆಯಲ್ಲಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.

ಸಿಂಧನೂರು–ಕಾಂಗ್ರೆಸ್‌ ವಿಜಯಪತಾಕೆ

ಸಿಂಧನೂರು ನಗರಸಭೆಯ ವಾರ್ಡ್ ನಂ-22ಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಬೇದಾಬೇಗಂ ಗಂ. ಮುನೀರ್‌ಪಾಷಾ ಗೆಲುವು ಸಾಧಿಸಿದ್ದಾರೆ.

ಮುನೀರ್‌ಪಾಷಾ ನಿಧನದಿಂದಾಗಿ ಖಾಲಿಯಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಬೇದಾಬೇಗಂ ಮುನೀರಪಾಷಾ 744, ಮಲ್ಲಿಕಾರ್ಜುನ ಕಾಟಗಲ್ 105, ಎಂ.ಮೆಹಬೂಬ 266 ಹಾಗೂ ಅಬ್ದುಲ್ ರಿಯಾಜ್ ಬುಡ್ಡಣ್ಣಿ 29 ಮತಗಳನ್ನು ಪಡೆದಿದ್ದಾರೆ. 6 ಮತಗಳು ನೋಟಾಕ್ಕೆ ಚಲಾವಣೆಯಾಗಿವೆ. ಕಾಂಗ್ರೆಸ್ ಅಭ್ಯರ್ಥಿ ಅಬೇದಾಬೇಗಂ ಅವರು 478 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಾಮದಾಸ ತಿಳಿಸಿದ್ದಾರೆ.

ಜೆಡಿಎಸ್‌ ಭದ್ರ ಕೋಟೆಯಲ್ಲಿ ಕಾಂಗ್ರೆಸ್‌ಗೆ ಜಯ

ದೇವದುರ್ಗ ಪುರಸಭೆ ವಾರ್ಡ್ ಸಂಖ್ಯೆ 5ಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಂಕೋಬ 125 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 387 ಮತ ಪಡೆದರೆ, ಆಡಳಿತ ಜೆಡಿಎಸ್ ಪಕ್ಷ ಅಭ್ಯರ್ಥಿ ಪ್ರಭು 262 ಮತ ಪಡೆದು ಮುಖಭಂಗ ಅನುಭವಿಸಿದ್ದಾರೆ. 133 ಮತ ಪಡೆದ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT