ರಾಯಚೂರು: ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿವೆ. ಪದೇ ಪದೇ ಮರುಕಳಿಸುತ್ತಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯು ದೇಶದ ವಿದ್ಯಾರ್ಥಿಗಳು, ಪಾಲಕರು ಹಾಗೂ ಶಿಕ್ಷಕರನ್ನು ಅಪಾರ ಆತಂಕಕ್ಕೆ ದೂಡಿದೆ. ಆದ್ದರಿಂದ ಎನ್ಟಿಎ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.

ಎಐಡಿಎಸ್ಒ ರಾಜ್ಯ ನಾಯಕಿ ಶಿಲ್ಪಾ ಬಿಕೆ ಮಾತನಾಡಿ, ‘ಮೇ 3 ರಂದು ನಡೆದ ನೀಟ್ ಯುಜಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪರಿಣಾಮ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎನ್ಟಿಎ ಪ್ರಕಟಿಸಿದೆ. ಇದು ಕೇವಲ ಒಂದು ಪರೀಕ್ಷಾ ಸಂಸ್ಥೆಯ ವೈಫಲ್ಯವಲ್ಲ. ಇದು ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಬೆವರು ಮತ್ತು ಕನಸುಗಳ ಮೇಲೆ ನಡೆದ ಅನ್ಯಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಕೇವಲ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ, ವೈದ್ಯಕೀಯ ಶಿಕ್ಷಣದ ಕನಸು ಹೊತ್ತವರ ಆಶೋತ್ತರಗಳಿಗೆ ಧಕ್ಕೆಯುಂಟಾಗಿದೆ. ಈ ಪ್ರಕರಣಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ದೇಶದ ಜನರ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ಈ ವೈಫಲ್ಯವು ವಿದ್ಯಾರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಹತಾಶೆಯನ್ನು ಮೂಡಿಸಿದೆ. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಅತಂತ್ರಕ್ಕೆ ದೂಡಿರುವ ಎನ್.ಟಿ.ಎಯನ್ನು ರದ್ದುಪಡಿಸಬೇಕು‘ ಎಂದು ಒತ್ತಾಯಿಸಿದರು.

ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಮಾತನಾಡಿ, ‘ಪಾರದರ್ಶಕವಾಗಿ ಮತ್ತು ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ ವಿಫಲವಾಗಿ ದೇಶದ ನಂಬಿಕೆಯನ್ನು ಕಳೆದುಕೊಂಡಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯನ್ನು ರದ್ದುಗೊಳಿಸಬೇಕು. ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದೆ ಇರುವ ವ್ಯಕ್ತಿಗಳು ಮತ್ತು ಕೋಚಿಂಗ್ ಮಾಫಿಯಾವನ್ನು ಪತ್ತೆಹಚ್ಚಲು ಉನ್ನತ ಮಟ್ಟದ ಸ್ವತಂತ್ರ ನ್ಯಾಯಾಂಗ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ನಿದರ್ಶನೀಯ ಶಿಕ್ಷೆಯಾಗಬೇಕು‘ ಎಂದು ಆಗ್ರಹಿಸಿದರು.

‘ಪ್ರವೇಶ ಪರೀಕ್ಷಾ ಪದ್ಧತಿಯನ್ನು ಬದಲಿಸಿ, ಸಾಮಾನ್ಯರಿಗೂ ಲಭ್ಯವಿರು ವಂತೆ, ಪಾರದರ್ಶಕವಾಗಿ ಮತ್ತು ಖಾಸಗಿ ವಾಣಿಜ್ಯ ಹಿತಾಸಕ್ತಿಗಳಿಂದ ಮುಕ್ತವಾಗಿರುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್ಒ ಜಿಲ್ಲಾ ಸಂಘಟನಕಾರರದ ಅಮೋಘ, ಶಿವಕುಮಾರ, ಶ್ರೀಕಾಂತ,ತರುಣ್, ಭಾಗ್ಯಶ್ರೀ ಹಾಗೂ ವಿವಿಧ ಕಾಲೇಜಿನ ನೂರಾರು ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಂಶುಪಾಲರು, ಶಿಕ್ಷಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-32-1275004932

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.