ರಾಯಚೂರು: ನರೇಗಾ ಕಾಮಗಾರಿ ನಡೆಯುವ ಸ್ಥಳದಲ್ಲಿ ಕಡ್ಡಾಯವಾಗಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಶಿಶುಪಾಲನಾ ಕೇಂದ್ರಗಳಲ್ಲಿ ಮಕ್ಕಳ ಆರೈಕೆ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಸ್ಥಳೀಯ ವೈದ್ಯಕೀಯ ನೆರವು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನರೇಗಾ ಯೋಜನೆಯ ಎಲ್ಲ ಅನುಷ್ಠಾನಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ತಿಳಿಸಿದ್ದಾರೆ.

ಬಿಸಿಲು ಹೆಚ್ಚಿರುವ ಕಾರಣ, ಕೂಲಿಕಾರರಿಗೆ ಬೆಳಗಿನ 6 ಗಂಟೆಗೆ ಕಾಮಗಾರಿಯ ಸ್ಥಳಕ್ಕೆ ಹಾಜರಾಗಿ 11.00 ಗಂಟೆಯೊಳಗೆ ನಿಗಡಿಪಡಿಸಿದ ಪ್ರಮಾಣದ ಕೆಲಸವನ್ನು ಮುಗಿಸಿ ಮನೆಗೆ ಹಿಂದಿರುಗುವಂತೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಧ್ಯಾಹ್ನ 12 ಗಂಟೆಯ ನಂತರ ಕಾರ್ಮಿಕರನ್ನು ಬಿಸಿಲಿನ ಝಳ ಹಾಗೂ ಆರೋಗ್ಯದ ದೃಷ್ಟಿಯಿಂದ ಕಾಮಗಾರಿಗಳಲ್ಲಿ ತೊಡಗಿಸದಂತೆ ಅನುಷ್ಠಾನಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕೂಲಿ ಕಾರ್ಮಿಕರಿಗೆ ಗ್ರಾಮ ಪಂಚಾಯಿತಿಯಿಂದಲೇ ನೀರು ಪೂರೈಸಲಾಗಿದ್ದು, ಕೆಲಸಕ್ಕೆ ಹಾಜರಾಗುವ ಅಂಗವಿಕಲರು ಹಾಗೂ ಹಿರಿಯ ನಾಗರಿಕರಿಗೆ ಕೂಲಿಕಾರರಿಗೆ ಕುಡಿಯಲು ನೀರು ಕೊಡುವ ಜವಾಬ್ದಾರಿ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಯಚೂರು ತಾಲ್ಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೃತಪಟ್ಟ ಕೂಲಿ ಕಾರ್ಮಿಕ ಹುಸೇನಪ್ಪ ಜಂಗ್ಲಪ್ಪ ಅವರ ಪತ್ನಿ ಸತ್ಯಮ್ಮ ಅವರಿಗೆ ₹ 2 ಲಕ್ಷ ಪರಿಹಾರ ಕೊಡಲಾಗಿದೆ. ಸಿಂಧನೂರು ತಾಲ್ಲೂಕಿನ ಮುಳ್ಳೂರು (ಇ.ಜೆ.) ಗ್ರಾಮದ ಕೂಲಿಕಾರ ಅಂಬಣ್ಣ ಬಸಣ್ಣ ಅವರ ಕುಟುಂಬಕ್ಕೂ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮಾನ್ವಿ ತಾಲ್ಲೂಕಿನ ಎಲ್ಲ 17 ಗ್ರಾಮ ಪಂಚಾಯಿತಿಗಳಲ್ಲಿ ಕೂಲಿಕಾರರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ನರೇಗಾ ಕಾಮಗಾರಿಗಳ ಅನುಷ್ಠಾನದಲ್ಲಿ ಸರ್ಕಾರ ಸೂಚಿಸಿದ ನಿಯಮಗಳಂತೆ ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-32-1822694818

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.