ರಾಯಚೂರು: ತಾಲ್ಲೂಕಿನ ಚಂದ್ರಬಂಡಾ ಗ್ರಾಮ ಪಂಚಾಯಿತಿಯ ಅರಸಿಗೇರಾ ತಾಂಡಾ ಸಮೀಪ ನರೇಗಾದಡಿ ಅರಣ್ಯ ಪ್ರದೇಶದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಭೇಟಿ ನೀಡಿ ಪರಿಶೀಲಿಸಿದರು.

‘ಕೂಲಿಕಾರರ ಹಾಜರಾತಿಯನ್ನು ಎನ್.ಎಂ.ಎಂ.ಎಸ್ ಆ್ಯಪ್ ಮುಖಾಂತರವೇ ಎರಡು ಬಾರಿ ಕಡ್ಡಾಯವಾಗಿ ತೆಗೆದುಕೊಳ್ಳಬೇಕು. ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಕೆಲಸಕ್ಕೆ ಬೇಗನೆ ಬರಬೇಕು. ನಿಮ್ಮಗೆ ನೀಡಿರುವ ಅಳತೆ ಪ್ರಕಾರ ಕೆಲಸ ಮಾಡಬೇಕು’ ಎಂದು ಸೂಚಿಸಿದರು.

ಆರೋಗ್ಯ ಕೇಂದ್ರಕ್ಕೆ ಭೇಟಿ: ಚಂದ್ರಬಂಡಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಲ್ಯಾಬ್ ಟೆಸ್ಟ್, ಲಸಿಕೆ ಸಂಗ್ರಹ ಕೋಣೆ, ಹೆರಿಗೆಯ ಕೋಣೆ, ಪುರುಷ, ಮಹಿಳೆಯರ ವಾರ್ಡ್ ಹಾಗೂ ಶಸ್ತ್ರಚಿಕಿತ್ಸೆ ಕೋಣೆಗಳಿಗೆ ಭೇಟಿ ನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು.

ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಒಣ, ಹಸಿ ಕಸ ವಿಂಗಡಣೆ ಮಾಡುವಲ್ಲಿ ನಿರ್ಲಕ್ಷ್ಯ ವಹಿಸಿದ ಪಿಡಿಒಗೆ ತರಾಟೆಗೆ ತೆಗೆದುಕೊಂಡರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ಮಲ ತ್ಯಾಜ್ಯ ವಿಲೇವಾರಿ ಘಟಕದ ಕಾಮಗಾರಿ ವೀಕ್ಷಣೆ ಮಾಡಿ ಶೀಫ್ರದಲ್ಲಿ ಬಾಕಿಯಿರುವ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರ ಮಾಡಬೇಕು ಎಂದು ಸೂಚಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಕಾರ್ಯನಿರ್ವಾಹಕ ಎಂಜಿನಿಯರ್ ಸತೀಶ್, ಸಹಾಯಕ ನಿರ್ದೇಶಕರಾದ ಹನುಮಂತ, ಶಿವಪ್ಪ, ಪಿಡಿಓ ಮೋಹಿನುದ್ದೀನ್, ಎಡಿಪಿಸಿ, ಡಿಐಇಸಿ, ಟಿಸಿ, ಟಿಎ ಹಾಗೂ ಗ್ರಾ.ಪಂ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-32-90422367

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.