ಹಟ್ಟಿ ಚಿನ್ನದ ಗಣಿ: ಗುರುಗುಂಟಾ ಸಮೀಪದ ಪೈದೊಡ್ಡಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ.

ಗ್ರಾಮದಲ್ಲಿ 3 ಸಾವಿರ ಜನಸಂಖ್ಯೆ ಇದೆ. 2 ವಾರ್ಡ್ಗಳಿವೆ. ನಾಲ್ವರು ಗ್ರಾ.ಪಂ ಸದಸ್ಯರು ಚುನಾಯಿತ ರಾಗುತ್ತಾರೆ. ಆದರೂ ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ.

1 ಕಿ.ಮೀ ದೂರ ಇರುವ ಬಾವಿಯ ನೀರೇ ಈ ಗ್ರಾಮದ ಜನರಿಗೆ ಆಸರೆಯಾಗಿದೆ. ಮಹಿಳೆಯರು, ಮಕ್ಕಳು ನೀರಿಗಾಗಿ ಅಲೆಯಬೇಕಾದ ಪರಿಸ್ಥಿತಿ ಇದೆ.

‘ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದೆ. ಆದರೆ, ಸಮರ್ಪಕ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಅದನ್ನು ಬಂದ್ ಮಾಡಲಾಗಿದೆ. ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ತಾ.ಪಂ ಕಚೇರಿ ಮುಂದೆ ಪ್ರತಿಭಟನೆ ಮಾಡಿ, ಮನವಿ ಸಲ್ಲಿಸಿ, ಮೂರು ತಿಂಗಳು ಕಳೆದರೂ ಅಧಿಕಾರಿಗಳು ಬಂದಿಲ್ಲ’ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ.

ಕೃಷ್ಣಾ ನದಿಯಿಂದ ಪೈದೊಡ್ಡಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಯೋಜನೆ ಇದ್ದರೂ ಅದು ಹಳ್ಳ ಹಿಡಿದಿದೆ.

‘ಪೈದೊಡ್ಡಿ ಗ್ರಾಮಕ್ಕೆ ಚುನಾವಣೆ ಬಂದಾಗ ಮಾತ್ರ ಜನಪ್ರತಿನಿಧಿಗಳು ಬರುತ್ತಾರೆ. ನಂತರ ಈ ಕಡೆ ಸುಳಿಯುವುದಿಲ್ಲ. ಗ್ರಾಮೀಣ ಭಾಗದ ಜನರ ಸಮಸ್ಯೆಗಳು ಸಮಸ್ಯೆಗಳಾಗಿಯೇ ಉಳಿದಿವೆ’ ಎನ್ನುತ್ತಾರೆ ಗ್ರಾಮಸ್ಥರು.

‘ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ, ನೀರಿನ ಸಮಸ್ಯೆ ಬಗೆಹರಿಸಬೇಕು. ಗ್ರಾ.ಪಂ, ತಾ.ಪಂ ಅಧಿಕಾರಿಗಳು ನಿರ್ಲಕ್ಷ್ಯ ಮಾಡಿದರೆ, ಮುಂದಾಗುವ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆಗಾಗರು ಎಂದು ಗ್ರಾಮಸ್ಥರಾದ ಈರಯ್ಯ ಸ್ವಾಮಿ, ಭೀಮಣ್ಣ, ಮುದುಕಪ್ಪ, ದ್ಯಾಮಣ್ಣ, ಬಸವರಾಜ, ರಾಮಣ್ಣ, ಗಂಗಾಧರ ಹಾಗೂ ಗುಂಡಪ್ಪ ಎಚ್ಚರಿಕೆ ನೀಡಿದ್ದಾರೆ.

ವಿದ್ಯುತ್ ಸಮಸ್ಯೆಯ ಕಾರಣಕ್ಕೆ ನೀರಿನ ಸಮಸ್ಯೆ ಎದುರಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿ, ಗ್ರಾಮದ ಜನರಿಗೆ ನೀರು ಒದಗಿಸಿಕೊಡಲಾಗುವುದು
ಭೀಮಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ಪೈದೊಡ್ಡಿ ಗ್ರಾಮದ ಜನರಿಂದ ದೂರುಗಳು ಬಂದಿವೆ. ಸ್ಥಳಕ್ಕೆ ಹೋಗಿ, ಸಮಸ್ಯೆ ಬಗೆಹರಿಸಿ, ನೀರಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು
ಉಮೇಶ, ತಾ.ಪಂ ಇಒ ಲಿಂಗಸುಗೂರು

ಪೈದೊಡ್ಡಿ ಗ್ರಾಮದಲ್ಲಿ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಸಮಸ್ಯೆ ಬಗೆಹರಿಸಲಿ
ಮುದುಕಪ್ಪ ಗುರಿಕಾರ, ಪೈದೊಡ್ಡಿ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.