ರಾಯಚೂರು: ತಾಲ್ಲೂಕಿನ ಉಡಮಗಲ್ ಖಾನಾಪುರ ಹಾಗೂ ಯಾಪಲದಿನ್ನಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ರಾಷ್ಟ್ರೀಯ ಗುಣಮಟ್ಟ ಭರವಸೆ ಮಾನದಂಡಗಳ ರಾಷ್ಟ್ರಮಟ್ಟದ ಮೌಲ್ಯಮಾಪನ ಪೂರ್ಣಗೊಳಿಸಿ ಗಮನಾರ್ಹ ಸಾಧನೆ ಮಾಡಿವೆ ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ತಿಳಿಸಿದ್ದಾರೆ.

ತಂಡದ ಡಾ.ಗಿರೀಶ್, ಡಾ.ಮೈನುದ್ದೀನ್, ವಿನಿತಾ ಆರ್. ಹಾಗೂ ಅಶೋಕ ಅವರು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದರು.

ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಮೂಲ ಸೌಕರ್ಯ, ರೋಗಿ ಸ್ನೇಹಿ ಸೇವೆಗಳು, ಆಸ್ಪತ್ರೆಯ ಸ್ವಚ್ಛತೆ, ಔಷಧಗಳ ಲಭ್ಯತೆ, ತುರ್ತು ಚಿಕಿತ್ಸಾ ವ್ಯವಸ್ಥೆ, ದಾಖಲೆ ನಿರ್ವಹಣೆ ಸೇರಿದಂತೆ ಹಲವು ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗಿತ್ತು. ಈ ಎಲ್ಲ ವಿಭಾಗಗಳಲ್ಲಿ ಉತ್ತಮ ಕಾರ್ಯನಿರ್ವಹಣೆ ತೋರಿದ ಪರಿಣಾಮ ಉನ್ನತ ಅಂಕಗಳನ್ನು ಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-32-1762119074

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.