ರಾಯಚೂರು: ‘ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯ ಲಾಭ ಪಡೆಯಲು ತರಾತುರಿಯಲ್ಲಿ ಮಹಿಳಾ ಮಸೂದೆ ಮಂಡಿಸಿದ್ದಕ್ಕೆ ಅದು ಅಂಗೀಕಾರಗೊಂಡಿಲ್ಲ. ಬಿಜೆಪಿ ಮುಖಂಡರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ರಾಯಚೂರು ಸಂಸದ ಕುಮಾರ ನಾಯಕ ವಾಗ್ಧಾಳಿ ನಡೆಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ಧಾಳಿ ಮಾಡಿದ್ದಾರೆ. ಅಂಸದೀಯ ಪದಗಳನ್ನು ಬಳಸಿ ಸುಳ್ಳು ಆರೋಪಗಳನ್ನು ಮಾಡಿದ್ದಾರೆ’ ಎಂದು ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗೆ ಸೋಲಾದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹತಾಶೆಗೊಂಡು ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ದೇಶದ ಜನರಿಗೆ ಬಿಜೆಪಿಯ ನಿಜವಾದ ಬಣ್ಣ ಗೊತ್ತಿದೆ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷವು ಮಹಿಳಾ ಮೀಸಲಾತಿ ಪರವಾಗಿದೆ. ಬಿಜೆಪಿ ಮಹಿಳೆಯರ ಹೆಸರಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು. 1971ರಲ್ಲಿ ಕ್ಷೇತ್ರ ಪುನರ್ವಿಂಗಡೆ ಆಗಬೇಕಿತ್ತು. ಅಂದಿನ ಸರ್ಕಾರ ಅದನ್ನು 30 ವರ್ಷ ಮುಂದೂಡಿತು. 2001ರಲ್ಲಿ ಅಟಲ್ಬಿಹಾರಿ ವಾಜಪೇಯಿ ಸರ್ಕಾರ ಬಂದಾಗ ಬಿಜೆಪಿ ಅವರಿಗೆ ಕ್ಷೇತ್ರ ಪುನರ್ ವಿಂಗಡಣೆ ಮಾಡಲು ಅವಕಾಶ ಇತ್ತು. ಮೋದಿ ಸರ್ಕಾರ ಎರಡು ದಿನ ಮೊದಲು ಸಂಸದರ ಕೈಗೆ ಪತ್ರಕೊಟ್ಟು, ವಿಚಾರ ವಿಮರ್ಶೆ ಮಾಡದೆ ಬೆಂಬಲಿಸಿ ಎಂದು ಒತ್ತಡ ಹಾಕಿದರೆ ಹೇಗೆ? ಎಂದು ಪ್ರಶ್ನಿಸಿದರು.

ರಾಜಕೀಯ ಲಾಭ ಪಡೆದುಕೊಳ್ಳಲು ದಕ್ಷಿಣಭಾರತದ ಕೆಲ ರಾಜ್ಯಗಳ ಚುನಾವಣೆಯನ್ನು ಮುಂದಿಟ್ಟುಕೊಂಡು ಮಸೂದೆ ಮಂಡಿಸಲು ಹೋಗಿ ಕೈಸುಟ್ಟುಕೊಂಡಿತು‘ ಎಂದು ಟೀಕಿಸಿದರು.

ಮೋದಿಯಿಂದ ರಾಜಕೀಯ ಭಯೋತ್ಪಾದನೆ: ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ಮುಖಂಡರನ್ನು ಹತ್ತಿಕ್ಕಲು ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದು ರಾಜಕೀಯ ಭಯೋತ್ಪಾದನೆ ಅಲ್ಲದೇ ಮತ್ತೇನೂ ಅಲ್ಲ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಸಂತಕುಮಾರ ವಾಗ್ದಾಳಿ ನಡೆಸಿದರು.

ಬಿಜೆಪಿ ಮುಖಂಡರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನು ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಖಂಡನೀಯ. ಖರ್ಗೆ ಅವರು ವಾಸ್ತಾವ ಅಂಶವನ್ನೇ ಹೇಳಿದ್ದಾರೆ. ಅವರ ಹೇಳಿಕೆಯನ್ನು ಕಾಂಗ್ರೆಸ್ ಸಮರ್ಥಿಸಿಕೊಳ್ಳುತ್ತದೆ’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-32-1898002133

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.