ಯಾದಗಿರಿ: ರಾಯಚೂರಿನ ಪೊಲೀಸ್ ಠಾಣೆಯೊಂದರ ಮಹಿಳಾ ಕಾನ್ಸ್ಟೆಬಲ್ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆಹಾಕಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ರಾಜ್ಯ ಗುಪ್ತಚರ ಯಾದಗಿರಿ ಘಟಕದ ಪಿಎಸ್ಐ ಈರಣ್ಣ ಆಲೂರು (34) ವಿರುದ್ಧ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮಹಿಳಾ ಕಾನ್ಸ್ಟೆಬಲ್ ನನ್ನೊಂದಿಗೆ ಮದುವೆಯಾಗಿ ವಂಚಿಸಿ ಈಗ ಬೇರೊಬ್ಬರೊಂದಿಗೆ ಮದುವೆ ಆಗುತ್ತಿದ್ದಾರೆ. ಆಕೆಯ ವಿರುದ್ಧ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು’ ಎಂದು ಕೋರಿ ಈರಣ್ಣ ಅವರು ರಾಯಚೂರು ಎಸ್ಪಿಗೆ ದೂರು ಕೊಟ್ಟಿದ್ದರು. ಇದರ ಬೆನ್ನಲ್ಲೇ ಮಹಿಳಾ ಕಾನ್ಸ್ಟೆಬಲ್ ಅವರು ಈರಣ್ಣ ವಿರುದ್ಧ ದೂರು ನೀಡಿದ್ದಾರೆ.

‘ಈರಣ್ಣ ಅವರು ಸಿಂದಗಿ ಕೋಚಿಂಗ್ ಕ್ಲಾಸ್ನಲ್ಲಿ ಪರಿಚಯವಾಗಿದ್ದರು. ಆಗಾಗ ಫೋನ್ನಲ್ಲಿ ಮಾತನಾಡುತ್ತಿದ್ದೆವು. ನಾನು ಎಸ್ಡಿಎ ಹುದ್ದೆಗೆ ಆಯ್ಕೆಯಾಗಿ ಕೊಪ್ಪಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಕೊಪ್ಪಳಕ್ಕೆ ಬಂದ ಈರಣ್ಣ, ನಾವಿಬ್ಬರೂ ಜೊತೆಯಲ್ಲಿ ಇರುವ ಫೋಟೊವನ್ನು ತೋರಿಸಿ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದರು’ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

‘ಕಾನ್ಸ್ಟೆಬಲ್ ಹುದ್ದೆಗೆ ಆಯ್ಕೆಯಾಗಿ ರಾಯಚೂರಿನಲ್ಲಿ ವಾಸವಾಗಿದ್ದಾಗಲೂ ಅಲ್ಲಿಗೆ ಬಂದು ಅತ್ಯಾಚಾರ ಎಸಗಿದ್ದಾರೆ. ಎರಡು ಬಾರಿ ಮಾತ್ರೆಗಳನ್ನು ನೀಡಿ ಗರ್ಭಪಾತ ಮಾಡಿಸಿದ್ದಾರೆ. ಜೊತೆಗೆ ಜಾತಿ ನಿಂದನೆ ಮಾಡಿ, ಅಪಹರಣಕ್ಕೆ ಯತ್ನಿಸಿದ್ದಾರೆ. ಇಬ್ಬರೂ ಜೊತೆಯಾಗಿರುವ ಫೋಟೊಗಳನ್ನು ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಹರಿಬಿಟ್ಟು ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದಾರೆ’ ಎಂದು ಮಹಿಳಾ ಕಾನ್ಸ್ಟೆಬಲ್ ಆರೋಪಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-30-1023752409

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.