ರಾಯಚೂರು: ರಾಯಚೂರು ನಗರ, ಮಸ್ಕಿ ಹಾಗೂ ದೇವದುರ್ಗ ಭಾಗದ ನಾಲ್ವರು ಸಿಪಿಐಗಳ ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರ್ದೇಶಕ ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದಾರೆ.

ರಾಯಚೂರು ಪಶ್ಚಿಮ ವೃತ್ತದ ಸಿಪಿಐ ನಾಗರಾಜ ಮೇಕಾ ಅವರನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಸದರ್ ಬಜಾರ್ ಪೊಲೀಸ್ ಠಾಣೆಯ ಸಿಪಿಐ ಉಮೇಶ ಕಾಂಬ್ಳೆ ಅವರನ್ನು ಪಶ್ಚಿಮ ವೃತ್ತಕ್ಕೆ ನಿಯೋಜಿಸಲಾಗಿದೆ. ಕರ್ನಾಟಕ ಲೋಕಾಯುಕ್ತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಾದಾವಲಿ ಕೆ.ಎಚ್. ಅವರನ್ನು ಸದರ್ ಬಜಾರ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮಸ್ಕಿ ವೃತ್ತದ ಸಿಪಿಐ ಪ್ರಕಾಶ ಮಾಳಿ ಅವರನ್ನು ವಿಜಯಪುರ ಜಿಲ್ಲಾ ಡಿಸಿಬಿಗೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಎಎನ್ಟಿಎಫ್ಗೆ ವರ್ಗಾವಣೆ ಆದೇಶದಲ್ಲಿದ್ದ ಪ್ರಕಾಶ ಯಾತನೂರ ಅವರನ್ನು ಮಸ್ಕಿ ವೃತ್ತಕ್ಕೆ ನೇಮಕ ಮಾಡಲಾಗಿದೆ.

ಕರ್ನಾಟಕ ಲೋಕಾಯುಕ್ತದಲ್ಲಿದ್ದ ಪುಂಡಲೀಕ ಪತ್ತಾರ ಅವರನ್ನು ದೇವದುರ್ಗ ಗ್ರಾಮಾಂತರ ವೃತ್ತಕ್ಕೆ ವರ್ಗಾವಣೆ ಮಾಡಲಾಗಿದೆ. ದೇವದುರ್ಗ ಗ್ರಾಮಾಂತರ ವೃತ್ತದಲ್ಲಿದ್ದ ಗುಂಡೂರಾವ್ ಎನ್.ವೈ. ಅವರನ್ನು ರಾಯಚೂರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-32-1760885271

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.