ರಾಯಚೂರು: ನಗರದ 19ನೇ ವಾರ್ಡ್ನಲ್ಲಿ ನಿರ್ಮಿಸಲಾಗಿರುವ ಬೃಹತ್ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ಅತ್ಯಂತ ಕಳಪೆಯಾಗಿದೆ. ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಮಾಜ ಸೇವಕ ಸಣ್ಣ ಬಾಬು ಒತ್ತಾಯಿಸಿದರು.

ಕಾಮಗಾರಿ ಅಂದಾಜು ಪತ್ರಿಕೆ ಪ್ರಕಾರ ನಡೆದಿಲ್ಲ. ಕಾಮಗಾರಿ ಸಂಪೂರ್ಣ ಕಳಪೆಯಾಗಿರುವುದು ಕಂಡುಬಂದಿದೆ. ಒಳಭಾಗದಲ್ಲಿ ಸಮರ್ಪಕವಾಗಿ ಪ್ಲಾಸ್ಟರಿಂಗ್ ಮಾಡಿಲ್ಲ, ಅಗತ್ಯ ಎತ್ತರದಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಮತ್ತು ಸರಿಯಾಗಿ ಕ್ಯೂರಿಂಗ್ ಮಾಡದಿರುವುದು ಕಂಡುಬಂದಿದೆ. ಇದರ ಜೊತೆಗೆ ಸುಣ್ಣ-ಬಣ್ಣದ ಕೆಲಸವನ್ನೂ ಮಾಡಿಲ್ಲ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.

ಕಾಮಗಾರಿಯಲ್ಲಿ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಟ್ಯಾಂಕ್ಗೆ ಸಂಪರ್ಕ ಹೊಂದಿರುವ ಪೈಪ್ಗಳು ಹಲವೆಡೆ ಒಡೆದು ನೀರು ಸೋರಿಕೆಯಾಗುತ್ತಿದೆ. ಈ ಕುರಿತು ಈಗಾಗಲೇ ದೂರು ನೀಡಿದ್ದರೂ ಯಾವುದೇ ಅಧಿಕಾರಿಗಳು ಗಮನಹರಿಸಿಲ್ಲ ಎಂದು ಆರೋಪಿಸಿದರು.

ವಾರ್ಡ್ ನಂ.19, 20ರ ಬಡಾವಣೆಗಳಿಗೆ ಇದೇ ಟ್ಯಾಂಕ್ನಿಂದ ನೀರು ಸರಬರಾಜಾಗುತ್ತಿರುವುದರಿಂದ ಕೂಡಲೇ ಗುಣಮಟ್ಟದ ಕಾಮಗಾರಿ ನಡೆಸಿ, ಸೋರಿಕೆಯಾಗುತ್ತಿರುವ ಪೈಪ್ಲೈನ್ಗಳನ್ನು ದುರಸ್ತಿ ಮಾಡಬೇಕು. ಇಲ್ಲವಾದಲ್ಲಿ ನಗರದ 35 ವಾರ್ಡ್ಗಳ ಜನರನ್ನು ಸಂಘಟಿಸಿಕೊಂಡು ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ರಘು, ವೆಂಕಟೇಶ, ರಾಜೇಶ, ಭರತ ಸೇರಿದಂತೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-338515763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.