ರಾಯಚೂರು: ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಛಲವಾದಿ ಮಹಾಸಭಾದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಡಾ. ಬಿ. ಆರ್. ಅಂಬೇಡ್ಕರ್ ವೃತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಛಲವಾದಿ ಮಹಾಸಭಾದ ಜಿಲ್ಲಾ ಸಮಿತಿಯ ಅಧ್ಯಕ್ಷ ವಿಶ್ವನಾಥ ಪಟ್ಟಿ ಮಾತನಾಡಿ, ‘ಜಿ. ಪರಮೇಶ್ವರ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದು, ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಸೇರಿದಂತೆ ಹಲವು ಪ್ರಮುಖ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಅನುಭವ ಅವರಿಗೆ ಇದೆ’ ಎಂದು ಹೇಳಿದರು.

2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ತಂದುಕೊಡುವಲ್ಲಿ ಪರಮೇಶ್ವರ ಅವರ ಸಂಘಟನಾ ಸಾಮರ್ಥ್ಯ ಪ್ರಮುಖವಾಗಿತ್ತು. ಉಪಮುಖ್ಯಮಂತ್ರಿಯಾಗಿ ಹಾಗೂ ವಿಧಾನ ಪರಿಷತ್ ಸಭಾ ನಾಯಕರಾಗಿ ರಾಜ್ಯದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ ಎಂದು ವಿವರಿಸಿದರು.

2023ರ ವಿಧಾನಸಭೆ ಚುನಾವಣೆಯಲ್ಲಿ ದಲಿತ ಸಮುದಾಯದ ಬೆಂಬಲದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ದಲಿತ ಸಮುದಾಯದ ಆಶಯಕ್ಕೆ ಸ್ಪಂದಿಸುವ ಸಮಯ ಬಂದಿದೆ. ರಾಜ್ಯದ ಮೊದಲ ದಲಿತ ಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ ಅವರನ್ನು ನೇಮಕ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ಐತಿಹಾಸಿಕ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಛಲವಾದಿ ಮಹಾಸಭಾದ ಜಿಲ್ಲಾ ಸಮಿತಿಯ ಪದಾಧಿಕಾರಿ ವಕೀಲ ತಮ್ಮಣ್ಣ, ಎಂ. ವಸಂತ, ಮಾರುತಿ, ಶರಣಪ್ಪ ನಂದಿಹಾಳ, ಯಲ್ಲಪ್ಪ, ವಿಜಯ ಪ್ರಸಾದ್ ಪಿ, ಎಸ್. ಪ್ರಕಾಶ, ಬಾಬು, ಬಿ.ಎ. ದೊಡ್ಡಮನಿ, ನಿರೂಪಾದಿ, ನರಸಿಂಹಲು, ಚಂದ್ರಶೇಖರ, ಗಂಗಾಧರ, ಮಲ್ಲಿಕಾರ್ಜುನ, ಲಿಂಗಪ್ಪ, ತಿಮ್ಮಪ್ಪ, ವೀರೇಶ ಗಾಣದಾಳ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-1585962388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.