ಮಂಗಳವಾರ, ಅಕ್ಟೋಬರ್ 4, 2022
26 °C

ರಾಯಚೂರಿನಲ್ಲಿ ರಾತ್ರಿ ಸುರಿದ ಮಳೆಗೆ ಜನಜಾಗರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಮಾಪಕದಲ್ಲಿ 16 ಮಿಲಿಮೀಟರ್‌ ದಾಖಲಾಗಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಯಚೂರು ನಗರದಲ್ಲಿ 59 ಮಿಲಿಮೀಟರ್‌ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಕೆಲವು ಬಡಾವಣೆಗಳು ಜಲಾವೃತವಾಗಿವೆ. ಸಿಯಾತಾಲಾಬ್‌, ಜಲಾಲನಗರ, ಹಾಜಿ ಕಾಲೋನಿ, ಸುಖಾಣಿ ಕಾಲೋನಿ ಕೊಳಗೇರಿಯಲ್ಲಿರುವ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಜಾಗರಣೆ ಮಾಡಿದ್ದಾರೆ.
ಮನೆಯಲ್ಲಿದ್ದ ಪಾತ್ರೆಗಳು, ಹೊದಿಕೆಗಳೆಲ್ಲ ಕೊಳಕು ನೀರಿನಿಂದ ಹಾಳಾಗಿದ್ದು, ಅಡುಗೆ ಮಾಡಿಕೊಳ್ಳುವುದಕ್ಕೆ ಸಾಧ್ಯವಾಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರು ನಗರಸಭೆ ಅಧಿಕಾರಿಗಳೊಂದಿಗೆ ಜಲಾವೃತವಾದ ಬಡಾವಣೆಗಳಿಗೆ ಭೇಟಿನೀಡಿ, ಜನರ ಸಂಕಷ್ಟ ಆಲಿಸಿದರು. ಸಂತ್ರಸ್ತ ಜನರಿಗೆ ನಗರಸಭೆಯಿಂದ ಉಪಹಾರ ಮತ್ತು ಊಟದ ವ್ಯವಸ್ಥೆ ಮಾಡುವುದಕ್ಕೆ ಸೂಚಿಸಿದ್ದಾರೆ.
ರಾಜಕಾಲುವೆಯಲ್ಲಿ ಸಮರ್ಪಕವಾಗಿ ಮಳೆನೀರು ಹರಿದು ಹೋಗಲು ವ್ಯವಸ್ಥೆಯಿಲ್ಲದ ಕಾರಣ
ಮಳೆನೀರು ಮನೆ ನುಗ್ಗುವ ಸಮಸ್ಯೆ ಪ್ರತಿವರ್ಷವೂ ಮರುಕಳಿಸುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಕಾರ್ಯವನ್ನು ನಗರಸಭೆಯಿಂದ ಮಾಡುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು