ರಾಯಚೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕರ್ನಾಟಕದ ತೀರ್ಮಾನಕ್ಕೆ ಕೇಂದ್ರದಲ್ಲಿ ಅನುಮೋದನೆ ಪಡೆಯಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಸಂಸದರನ್ನು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಾರ್ಟಿ ಕಾರ್ಯಕರ್ತರು ನಗರದ ಟಿಪ್ಪು ಸುಲ್ತಾನ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ರಾಜ್ಯದ ಸಂಸದರು ರಾಜ್ಯದ ಜನತೆಯ ಹಿತವನ್ನು ಕಾಯಲು ಪಕ್ಷಭೇದ ಮರೆತು ಭಾರತ ಸರ್ಕಾರ ಅನುಮೋದನೆ ನೀಡುವಂತೆ ಮತ್ತು ಸಂವಿಧಾನದ ಷೆಡ್ಯೂಲ್ 9ಕ್ಕೆ ಸೇರಿಸುವಂತೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.

ಕೇಂದ್ರದಲ್ಲಿ ಇರುವಂತೆ ಶೇ 17 ಮತ್ತು ಶೇ 7ರ ಜಾರಿಗೆ ಅನುವು ಮಾಡಿಕೊಡಬೇಕು. ಇದಕ್ಕಾಗಿ ರಾಜ್ಯದ ಸಂಸದರು ವಿಶೇಷ ಒತ್ತಡದ ಪ್ರಯತ್ನಗಳನ್ನು ನಡೆಸಬೇಕು ಎಂದು ಆಗ್ರಹಿಸಿದರು.

ಬ್ಯಾಕ್ಲಾಗ್ ಹುದ್ದೆಗಳನ್ನು ಸಾಮಾನ್ಯ ಗುಂಪಿಗೆ ವರ್ಗಾಯಿಸಬಾರದು. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಸುಮಾರು 3 ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಬೇಕು. ಸಾರ್ವಜನಿಕ ರಂಗಗಳಲ್ಲೂ ಕಾಯಂ ಉದ್ಯೋಗಗಳನ್ನು ತುಂಬಬೇಕು. ಮೀಸಲಾತಿಯನ್ನು ರಕ್ಷಿಸಬೇಕು ಎಂದು ಮನವಿ ಮಾಡಿದರು.

ಉದಾರೀಕರಣ ಮತ್ತು ಖಾಸಗೀಕರಣದಿಂದ ಪ್ರಧಾನವಾಗಿ ಉದ್ಯೋಗಗಳ ಸೃಷ್ಟಿಯು ಖಾಸಗಿ ರಂಗದಲ್ಲೇ ಹೆಚ್ಚಾಗಿದೆ. ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯದ ಸಾಧನೆಯಲ್ಲಿ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ನೀತಿ ಜಾರಿಗೊಳಿಸಲು ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಗಳಿಗೆ ಇಡಬ್ಲ್ಯೂಎಸ್ ಕೋಟಾದಲ್ಲಿ ಶೇ 10ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರವೇ ಒದಗಿಸಿರುವ ಉದಾಹರಣೆ ಇದೆ. ಅದೂ ಕೇವಲ 49 ಗಂಟೆಗಳಲ್ಲಿಯೇ ಜಾರಿಗೆ ಬರುವಂತೆ ನೋಡಿಕೊಳ್ಳಲಾಗಿದೆ. ಶೇ 50ರ ಮಿತಿ ದಾಟಿದ ಹಲವು ರಾಜ್ಯಗಳೂ ಇಂತಹ ಅವಕಾಶ ಪಡೆದುಕೊಂಡಿವೆ. ಕರ್ನಾಟಕ ತನ್ನ ಕೋರಿಕೆಯನ್ನು 2022ರಲ್ಲೇ ಮಂಡಿಸಿದೆ. ಆದ್ದರಿಂದ ರಾಜ್ಯದ ಕೋರಿಕೆಗೆ ಭಾರತ ಸರ್ಕಾರ ಕೂಡಲೇ ಅಂಗೀಕಾರ ನೀಡಬೇಕು ಎಂದು ಮನವಿ ಮಾಡಿದರು.

ನೇಮಕಾತಿ ಪ್ರಕ್ರಿಯೆಯ ರೋಸ್ಟರ್ ನಿಯಮದಲ್ಲಿ ಎಡ, ಬಲ, ಸ್ಪೃಶ್ಯ, ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗದ ರೀತಿಯಲ್ಲಿ ರಾಜ್ಯ ಸರ್ಕಾರ ಖಾತ್ರಿಗೊಳಿಸುವಂತೆ ತಾವು ಕ್ರಿಯಾಶೀಲ ಪಾತ್ರವಹಿಸಬೇಕು. ಪರಿಸ್ಥಿತಿಯ ಗಂಭೀರತೆ ಹಾಗೂ ಸೂಕ್ಷ್ಮತೆಗಳನ್ನು ಗಮನದಲ್ಲಿರಿಸಿ ಕೇಂದ್ರ ಸರ್ಕಾರ ತುರ್ತು ಕ್ರಮ ವಹಿಸುವಂತೆ ಒತ್ತಡ ಹಾಕಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಸಿಪಿಐ (ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವಿರೇಶ, ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್.ಪದ್ಮಾ, ಡಿ.ಎಸ್.ಶರಣಬಸವ, ನರಸಣ್ಣ ನಾಯಕ, ಪಿ.ಗಿರಿಯಪ್ಪ, ಶಬ್ಬೀರ್ ಜಾಲಹಳ್ಳಿ, ದೇವೇಂದ್ರ ಗೌಡ, ಜಿಲ್ಲಾ ಸಮಿತಿ ಸದಸ್ಯರಾದ ಬಸವಂತರಾಯ ಗೌಡ, ವರಲಕ್ಷ್ಮೀ, ಕರಿಯಪ್ಪ ಅಚ್ಚೋಳಿ, ಸತ್ಯಪ್ಪ, ಜಿಲಾನಿ ಪಾಷಾ, ಹನುಮಂತ ಗುರಿಕಾರ, ಶರಣಮ್ಮ, ಗೋಕಾರಮ್ಮ, ರೆಹಮತ್, ಗಂಗಮ್ಮ, ಸರೋಜಮ್ಮ, ಶಾಲಂಬಿ, ವಿಶಾಲಾಕ್ಷಿ, ಮಲ್ಲೇಶಪ್ಪ, ನರಸಮ್ಮ, ಅಂಜಿನಮ್ಮ, ಮಮತಾ ನಾಗಪ್ಪ, ರಮೇಶ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-32-274202658

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.