ಜಾಲಹಳ್ಳಿ: ಹೊಸೂರು-ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ 6 ಗ್ರಾಮಗಳ ಕಂದಾಯ ಇಲಾಖೆಯ ದಾಖಲೆಗಳನ್ನು ದೇವದುರ್ಗ ತಾಲ್ಲೂಕಿಗೆ ವರ್ಗಾವಣೆ ಮಾಡಬೇಕು ಎಂದು ಹೊಸೂರು–ಸಿದ್ದಪುರ ಹೋರಾಟ ಸಮಿತಿ ಅಧ್ಯಕ್ಷ ಬಸವರಾಜ ಮಂಡಲಗುಡ್ಡ ಒತ್ತಾಯಿಸಿದ್ದಾರೆ. ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮೂರುವರೆ ವರ್ಷಗಳ ಹಿಂದೆ ನಿಯಮ ಪಾಲಿಸದೆ ನೂತನ ತಾಲ್ಲೂಕು ಕೇಂದ್ರವಾಗಿ ಅರಕೇರ ಗ್ರಾಮವನ್ನು ಹೊಸ ತಾಲ್ಲೂಕಾಗಿ ಘೋಷಣೆ ಮಾಡಲಾಗಿತ್ತು. ಗ್ರಾ.ಪಂ ವ್ಯಾಪ್ತಿಯ ಎಲ್ಲ ಚುನಾಯಿತ ಪ್ರತಿನಿಧಿಗಳು ಹಾಗೂ ಸಂಘ ಸಂಸ್ಥೆಯ ಸಹಕಾರದಿಂದ ನಿರಂತರವಾಗಿ ಹೋರಾಟ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸೂರು ಸಿದ್ದಾಪುರ ಗ್ರಾ.ಪಂ ವ್ಯಾಪ್ತಿಯ 6 ಗ್ರಾಮಗಳನ್ನು ಅರಕೇರ ತಾಲ್ಲೂಕು ಕೇಂದ್ರದಿಂದ ಕೈ ಬಿಟ್ಟು ದೇವದುರ್ಗಕ್ಕೆ ಮರಳಿ ಸೇರ್ಪಡೆ ಮಾಡಿದ್ದಾರೆ. ಆದರೆ, 5 ತಿಂಗಳಿಂದ ಕಂದಾಯ ಇಲಾಖೆಯ ದಾಖಲೆಗಳು ದೇವದುರ್ಗಕ್ಕೆ ವರ್ಗಾವಣೆ ಮಾಡದೇ ಇರುವುದರಿಂದ ರೈತರಿಗೆ ತುಂಬಾ ತೊಂದರೆ ಉಂಟಾಗಿದೆ. ಮುಂಗಾರು ಪ್ರಾರಂಭಗೊಳ್ಳುವ ಮುಂಚೆಯೇ ಭೂ ದಾಖಲೆಗಳನ್ನು ದೇವದುರ್ಗಕ್ಕೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಮುಂದಿನ ಒಂದು ತಿಂಗಳೊಳಗೆ ಮಾಡದಿದ್ದರೆ, ಕಂದಾಯ ಇಲಾಖೆ ಕಚೇರಿ ಎದುರು ಗ್ರಾಮಸ್ಥರನ್ನು ಸೇರಿಸಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-32-406481471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.