ರಾಯಚೂರು: ಶಹೀದ್ ರಾಮ್ಪ್ರಸಾದ್ ಬಿಸ್ಮಿಲ್, ಅಸ್ಪಾಕ್ ಉಲ್ಲಾಖಾನ್ ಮತ್ತು ರೋಶನ್ ಸಿಂಗ್ ಅವರ ಪ್ರತಿಮೆಗಳನ್ನು ಮಾ.23ರಂದು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಧ್ವಂಸ ಗೊಳಿಸಿರುವುದು ಖಂಡನೀಯ ಎಂದು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಜಿಲ್ಲಾ ಕಾರ್ಯದರ್ಶಿ ವಿನೋದಕುಮಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಸೌಂದರ್ಯೀಕರಣದ ಹೆಸರಿನಲ್ಲಿ ಶಾಜಹಾನಪುರದ ನಗರಸಭಾ ಅಧಿಕಾರಿಗಳು ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಮಹಾನ್ ಕ್ರಾಂತಿಕಾರಿಗಳ ಪ್ರತಿಮೆಗಳನ್ನು ಕೆಡವಿಸಿದೆ. ಈ ಮೂಲಕ ಮಹಾನ್ ಕ್ರಾಂತಿಕಾರಿಗಳ ನೆನಪನ್ನು ಜನಮಾನಸದಿಂದ ಅಳಿಸಿ ಹಾಕಲು ಪ್ರಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಈ ಘಟನೆಗೆ ಉತ್ತರ ಪ್ರದೇಶದಾದ್ಯಂತ ಜನರಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಜನವಿರೋಧಕ್ಕೆ ಮಣಿದ ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ಅಲ್ಲಿನ ನಗರಸಭೆಯ ಎಂಜಿನಿಯರ್ ಮತ್ತು ಅಧಿಕಾರಿಯನ್ನು ಅಮಾನತುಗೊಳಿಸಿದೆ. ಆದರೆ, ಇಷ್ಟು ಸಾಲದು. ಕೆಡವಿರುವ ಆ ಪ್ರತಿಮೆಗಳನ್ನು ತಕ್ಷಣವೇ ಸೂಕ್ತ ಗೌರವದೊಂದಿಗೆ ಮರು ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-32-1374862617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.