ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ನೀರಮಾನ್ವಿ ತಾಂಡಾದಲ್ಲಿ 2017ರಲ್ಲಿ ನಡೆದಿದ್ದ ದರೋಡೆ ಮತ್ತು ಕೊಲೆ ಪ್ರಕರಣದ ಆದೇಶ ಪ್ರಕ ಟವಾಗಿದ್ದು ಅಲೆಮಾರಿ ದರೋಡೆ ಗ್ಯಾಂಗ್ನ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಆರೋಪಿ ಹಶ್ಯಾ ಅಲಿಯಾಸ್ ರಮೇಶ್ಗೆ ಜೀವಾವಧಿ ಶಿಕ್ಷೆ ಹಾಗೂ ₹30 ಸಾವಿರ ದಂಡ ವಿಧಿಸಲಾಗಿದೆ. ಕದ್ದ ಚಿನ್ನಾಭರಣ ಕೊಳ್ಳುತ್ತಿದ್ದ ಆರೋಪಿ ಮೌನೇಶ್ಗೆ 2 ವರ್ಷ ಜೈಲು ಮತ್ತು ₹20ಸಾವಿರ ದಂಡ ವಿಧಿಸಿ ರಾಯಚೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.

ದರೋಡೆ ವೇಳೆ ತಡೆಯಲು ಮುಂದಾದ ಮನೆ ಮಾಲೀಕ ಡಾಕ್ಯಾನಾಯಕ್ ಎದೆಗೆ ಚಾಕು ಚುಚ್ಚಿ ಪರಾರಿಯಾಗಿದ್ದರು. ಡಾಕ್ಯಾನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಿದ್ದ ತಂಡ ಈ ಕೃತ್ಯ ಎಸಗಿತ್ತು. ₹50 ಸಾವಿರ ಹಣ, ₹30,400 ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದರು. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪರ್ಲಿ ಮೂಲದ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿಗಳಾದ ಇಸ್ರಾಮ್, ಪಲ್ಲು ಗೋವಿಂದ ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ತಪ್ಪಿಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.

ಆರೋಪಿಗಳಾದ ಗೌರಿತಾಯಿ, ಶಿಶಬಾಯಿ ಜಾಮೀನು ಪಡೆದ ಬಳಿಕ ನಾಪತ್ತೆಯಾಗಿದ್ದಾರೆ. ಹೀಗಾಗಿ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಾತ್ರ ಶಿಕ್ಷೆ ಪ್ರಕಟವಾಗಿದೆ. ಜಿಲ್ಲೆಯ ಹಲವೆಡೆ ಕಳ್ಳತನ ಮಾಡಿಕೊಂಡು ಓಡಾಡಿಕೊಂಡಿದ್ದ ಅಲೆಮಾರಿ ಗ್ಯಾಂಗ್ ಕದ್ದ ಚಿನ್ನಾಭರಣ ಮೌನೇಶ್ಗೆ ನೀಡಿ ಹಣ ಪಡೆಯುತ್ತಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-32-206036675

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.