ರಾಯಚೂರು: ರಾಜ್ಯ ಸರ್ಕಾರ ಸಂಘ ಪರಿವಾರವನ್ನು ಸಮಾಧಾನಪಡಿಸುವ ಉದ್ದೇಶದಿಂದ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ, ಆಂದೋಲಾ ಸ್ವಾಮಿ ಸೇರಿದಂತೆ ಕೋಮು ದ್ವೇಷ ಹರಡಿ ಗಲಭೆ ಸೃಷ್ಟಿಸಿದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ತೆಗೆದುಕೊಂಡಿರುವ ನಿರ್ಧಾರ ತಕ್ಷಣ ರದ್ದುಪಡಿಸಬೇಕು ಎಂದು ಒತ್ತಾಯಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘದ ಪದಾಧಿಕಾರಿಗಳು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ಈ ತೀರ್ಮಾನ ಜನತಂತ್ರ ಹಾಗೂ ಕಾನೂನು ಸುವ್ಯವಸ್ಥೆಯ ಮೂಲ ತತ್ವಗಳ ಮೇಲಿನ ನೇರ ದಾಳಿಯಾಗಿದೆ. ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸಿ, ಅಲ್ಪಸಂಖ್ಯಾತರು ಮತ್ತು ದಲಿತರ ವಿರುದ್ಧ ವಿಷಕಾರಿ ಭಾಷಣಗಳ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದವರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು. ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಹೇಳುವ ಸರ್ಕಾರವೇ ಸಮಾಜಘಾತುಕ ಶಕ್ತಿಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಆತಂಕಕಾರಿ ಬೆಳವಣಿಗೆ. ದ್ವೇಷ ರಾಜಕಾರಣಕ್ಕೆ ಉತ್ತೇಜನ ನೀಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾದ ಸರ್ಕಾರವೇ ಅವರಿಗೆ ವಿಶೇಷ ರಿಯಾಯಿತಿ ನೀಡುತ್ತಿರುವುದು ಪ್ರಶ್ನಾರ್ಹವಾಗಿದೆ ಎಂದರು. ಮತೀನ್ ಅನ್ಸಾರಿ, ತೌಸೀಫ್ ಅಹ್ಮದ್, ಎಂ.ಡಿ.ಗೌಸ್, ಸೈಯದ್ ಅಬ್ದುಲ್ ಅಜೀಜ್, ಹಾಫಿಝ್ ಮೆಹಮೂದ್, ರಫಿಯುದ್ದೀನ್, ಶೇಖ್ ಉಝೇರ್, ಮುಸ್ತಾಕ್ ಅಹ್ಮದ್, ಎಂ.ಡಿ ಶಫಿ, ಶೇಖ್ ದಾವೂದ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-11317474

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.