ರಾಯಚೂರು: ‘ಗ್ರಾಮೀಣ ಭಾಗದ ಮಹಿಳೆಯರಿಗೆ ಆರ್ಥಿಕ ಸಹಕಾರ ಒದಗಿಸುವುದರ ಜೊತೆಗೆ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ನೀಡುವ ಉದ್ದೇಶದಿಂದ ‘ಅಕ್ಕ ಕೆಫೆ’ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಶರಣಬಸವ ಕೆಸರಟ್ಟಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ, ಜೀವನೋಪಾಯ ಮತ್ತು ಉದ್ಯಮಶೀಲತೆ ಇಲಾಖೆ ವತಿಯಿಂದ ಅಕ್ಕ ಕೆಫೆ ನಿರ್ವಹಣೆ ಮಾಡುವ ಸ್ವಸಹಾಯ ಗುಂಪಿನ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಲಿಂಗಸುಗೂರು ಹಾಗೂ ರಾಯಚೂರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಕ ಕೆಫೆಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಇದರಿಂದ ಹಲವು ಸ್ವ–ಸಹಾಯ ಗುಂಪಿನ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿದ್ದಾರೆ ಎಂದು ತಿಳಿಸಿದರು.

ಸಿಂಧನೂರು ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಜಿಲ್ಲಾ ಪಂಚಾಯಿತಿ ಕಚೇರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇನ್ನೂ 10 ಅಕ್ಕ ಕೆಫೆಗಳನ್ನು ಆರಂಭಿಸಲಾಗುತ್ತಿದ್ದು, ಕೆಫೆ ನಿರ್ವಹಣೆ ಕುರಿತು ತರಬೇತಿ ಪಡೆಯುವುದು ಅತ್ಯವಶ್ಯ ಎಂದರು.

ಅಕ್ಕ ಕೆಫೆಗಳಲ್ಲಿ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕನಿಷ್ಠ ಬಾಡಿಗೆ ಹಾಗೂ ಗ್ಯಾಸ್ ಸಿಲೆಂಡರ್ ವೆಚ್ಚವನ್ನು ಮಹಿಳೆಯರು ಭರಿಸಬೇಕಿದ್ದು, ಕೆಫೆ ನಿರ್ಮಾಣ, ಗ್ಯಾಸ್ ಸ್ಟವ್ ಹಾಗೂ ಇತರ ಉಪಕರಣಗಳನ್ನು ಜಿಲ್ಲಾ ಪಂಚಾಯಿತಿಯಿಂದಲೇ ನೀಡಲಾಗುತ್ತಿದೆ ಎಂದರು.

ತಾ.ಪಂ. ಇಒ ಚಂದ್ರಶೇಖರ ಪವಾರ್ ಮಾತನಾಡಿದರು. ತರಬೇತುದಾರ ನಾಗರಾಜ, ಸ್ತ್ರೀಶಕ್ತಿ ಒಕ್ಕೂಟಗಳ ಸಂಚಾಲಕಿ ಶ್ರೀದೇವಿ ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-1462803378

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.