ರಾಯಚೂರು: 2026–27ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಜೂನ್ 1ರಂದು ಚಾಲನೆ ದೊರೆಯಲಿದ್ದು, ಶಾಲಾ ಶಿಕ್ಷಣ ಇಲಾಖೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸುತ್ತಿದೆ. ಬೇಸಿಗೆ ರಜೆ ಬಳಿಕ ಶಾಲೆಯತ್ತ ಮರಳುವ ಮಕ್ಕಳನ್ನು ಸ್ವಾಗತಿಸಲು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಸಜ್ಜಾಗಿವೆ.

ಈ ಬಾರಿ ಶಾಲೆ ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿಶೇಷ ಯೋಜನೆ ರೂಪಿಸಿದೆ. ಮಕ್ಕಳಿಗೆ ತೊಂದರೆ ಆಗದಂತೆ ಅಗತ್ಯ ಶೈಕ್ಷಣಿಕ ಸಾಮಗ್ರಿಗಳನ್ನು ಮುಂಚಿತವಾಗಿಯೇ ಶಾಲೆಗಳಿಗೆ ತಲುಪಿಸುವ ಕಾರ್ಯ ವೇಗವಾಗಿ ನಡೆಯುತ್ತಿದೆ.

ಜಿಲ್ಲೆಯ 1ರಿಂದ 10ನೇ ತರಗತಿವರೆಗಿನ ಸಾವಿರಾರು ವಿದ್ಯಾರ್ಥಿಗಳು ಹೊಸ ಶೈಕ್ಷಣಿಕ ವರ್ಷಕ್ಕೆ ಸೇರ್ಪಡೆಯಾಗಲಿದ್ದು, ಶಾಲಾ ಆವರಣಗಳಲ್ಲಿ ಸ್ವಚ್ಛತೆ, ಕುಡಿಯುವ ನೀರು, ಶೌಚಾಲಯ, ತರಗತಿ ಕೊಠಡಿಗಳ ದುರಸ್ತಿ ಸೇರಿದಂತೆ ಮೂಲಸೌಕರ್ಯಗಳ ಮೇಲೂ ಅಧಿಕಾರಿಗಳು ಗಮನ ಹರಿಸಿದ್ದಾರೆ.

ವಿದ್ಯಾರ್ಥಿಗಳನ್ನು ಆಕರ್ಷಿಸುವ ಉದ್ದೇಶದಿಂದ ಕೆಲವು ಶಾಲೆಗಳಲ್ಲಿ ಸ್ವಾಗತ ಸಮಾರಂಭ, ಹೂವಿನ ಮಳೆ, ಸಿಹಿ ವಿತರಣೆ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಯುತ್ತಿದೆ. ಮೊದಲ ದಿನವೇ ಮಕ್ಕಳಲ್ಲಿ ಉತ್ಸಾಹ ಹೆಚ್ಚಿಸುವ ಮೂಲಕ ದಾಖಲಾತಿ ಹೆಚ್ಚಿಸಲು ಇಲಾಖೆ ಮುಂದಾಗಿದೆ.

ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ ಅಂದು ಪಠ್ಯಪುಸ್ತಕಗಳ ವಿತರಣೆ ನಡೆಯಲಿದೆ. ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಶಾಲಾ ಆರಂಭವನ್ನು ಹಬ್ಬದ ವಾತಾವರಣದ ಮಾದರಿಯಲ್ಲಿ ನಡೆಸಲು ತಯಾರಿ ನಡೆಸಿದ್ದಾರೆ.

ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪೋಷಕರಲ್ಲೂ ಸಂತಸ ಮನೆ ಮಾಡಿದ್ದು, ಮಕ್ಕಳ ಶಿಕ್ಷಣದತ್ತ ಮತ್ತಷ್ಟು ಗಮನ ಹರಿಸಲು ಶಾಲೆಗಳು ಮುಂದಾಗಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-32-1314642130

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.