ಸಿಂಧನೂರು: ಬಸವ ಜಯಂತಿ ಅಂಗವಾಗಿ ಬಸವಕೇಂದ್ರ ಮತ್ತು ಬಸವ ಚಾರಿಟಬಲ್ ಟ್ರಸ್ಟ್ ಇತರ ಬಸವಪರ ಸಂಘಟನೆಗಳಿಂದ ಸೋಮವಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಸವ ಕೇಂದ್ರದ ಮುಖಂಡ ಚಂದ್ರೇಗೌಡ ಹರೇಟನೂರು ತಿಳಿಸಿದ್ದಾರೆ.

ಭಾನುವಾರ ಹೇಳಿಕೆ ನೀಡಿರುವ ಅವರು, ‘ಶಾಸಕ ಹಂಪನಗೌಡ ಬಾದರ್ಲಿ ಬಸವ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ನಂತರ ವೀರಶೈವ ಕಲ್ಯಾಣಮಂಟಪದಲ್ಲಿ ವೀರಶೈವ ಲಿಂಗಾಯತ ಸಮಾಜದಿಂದ ಬಸವ ಜಯಂತಿ ಆಚರಣೆ ಮಾಡಲಾಗುವುದು. ಹಿಂದುಳಿದ ವರ್ಗಗಳ ಇಲಾಖೆಯಿಂದ 2025-26ನೇ ಸಾಲಿನ ಅಂದಾಜು ₹25 ಲಕ್ಷದಲ್ಲಿ ವೆಚ್ಚದಲ್ಲಿ ಹಟ್ಟಿ ರಸ್ತೆಯಲ್ಲಿ ನಾಗರಿಕ ಸೌಲಭ್ಯದ ನಿವೇಶನದಲ್ಲಿ ಬಸವ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗುವುದು. ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಬಸವಕೇಂದ್ರದ ಅಧ್ಯಕ್ಷ ಕರೇಗೌಡ ಕುರುಕುಂದಿ, ಬಸವ ಉತ್ಸವ ಸಮಿತಿ ಅಧ್ಯಕ್ಷ ಡಾ.ಬಿ.ಎನ್.ಪಾಟೀಲ್, ಗೌರವ ಅಧ್ಯಕ್ಷರಾದ ಸಿದ್ರಾಮಪ್ಪ ಮಾಡಸಿರವಾರ, ಹನುಮನಗೌಡ ಬೆಳಗುರ್ಕಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-32-1099398304

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.