ಸಿಂಧನೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಶುಕ್ರವಾರ ಸಂಜೆ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗಳಾಗಿವೆ.

ತಾಲ್ಲೂಕಿನ ಅರಗಿನಮರ ಕ್ಯಾಂಪ್ನ ಮಾರುತಿನಗರದ ನಿವಾಸಿ ಭೂಮಿಕಾ ವೀರರಾಜು (18) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿಯರಾದ ಮಹೇಶ್ವರಿ ಸಾಸಲಮರಿ, ಜೈಬಾ ಮಹಿಬೂಬಿಯಾ ಕಾಲೊನಿ ಮತ್ತು ಮೇಘನಾ ಸುಲ್ತಾನಪುರ ಅವರ ಕೈ, ಕಾಲು, ತಲೆ ಮತ್ತು ಹೊಟ್ಟೆಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅವರನ್ನು ನಗರದ ಶಾಂತಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇನ್ನಿಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚೇತನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶುಕ್ರವಾರ ಸಂಜೆ ಈ ಆರು ವಿದ್ಯಾರ್ಥಿನಿಯರು ಎವಿಎಸ್ ಬ್ರಿಲಿಯಂಟ್ ಕಾಲೇಜಿನಲ್ಲಿ ದ್ವಿತೀಯ ಪಿಯು ಕೋಚಿಂಗ್ ಮುಗಿಸಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಚೇತನ್ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯಸೇವಿಸಿದ್ದ ಕಾರಿನ ಚಾಲಕ ದುರ್ಗ ಪವನಕುಮಾರ ಮಲ್ಲದಗುಡ್ಡ ಅತಿವೇಗದಿಂದ ಹಿಂದಕ್ಕೆ ಕಾರು ತೆಗೆದುಕೊಂಡಿದ್ದರಿಂದ ಡಿಕ್ಕಿ ಹೊಡೆದಿದೆ.

ಭೂಮಿಕಾ ತಲೆಗೆ ಪಕ್ಕದಲ್ಲಿದ್ದ ಗೋಡೆ ಬಡೆದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹೇಶ್ವರಿ, ಜೈಬಾ ಮತ್ತು ಮೇಘನಾ ಅವರಿಗೆ ಗಂಭೀರ ಗಾಯಗಳಾಗಿವೆ. ಶಾಂತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಹರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವೀರಾರೆಡ್ಡಿ.ಎಚ್ ಹಾಗೂ ಸಂಚಾರ ಪೊಲೀಸ್ ಠಾಣೆಯ ಪ್ರಭಾರ ಪಿಎಸ್ಐ ಅಂಬಾದಾಸ್ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಎವಿಎಸ್ ಬ್ರಿಲಿಯಂಟ್ ಕಾಲೇಜಿನ ಸಂಸ್ಥಾಪಕ ಎಂ.ಸಿ.ಅಂಕಯ್ಯ, ಕಾರ್ಯದರ್ಶಿ ವೆಂಕಟೇಶ್ವರರಾವ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ ಶಾಂತಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-33-89078640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.