ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆ ಜೊತೆ ಅನೈತಿಕ ಸಂಬಂಧ: ತಲೆಮರೆಸಿಕೊಂಡಿದ್ದ ಶಿಕ್ಷಕನ ಸೆರೆ

Last Updated 3 ಜುಲೈ 2022, 18:11 IST
ಅಕ್ಷರ ಗಾತ್ರ

ಕೊಪ್ಪಳ: ಐದು ದಿನಗಳಿಂದ ತಲೆ ಮರೆಸಿಕೊಂಡಿದ್ದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಮಹಮ್ಮದ್ ಅಜರುದ್ದೀನ್ ಅವರನ್ನು ಪೊಲೀಸರು ಭಾನುವಾರ ಗೋವಾ ಸಮೀಪ ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ವಾಸವಾಗಿದ್ದ ಶಿಕ್ಷಕ, ಅಲ್ಲಿನ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಶಿಕ್ಷಣ ಇಲಾಖೆ ಆತನನ್ನು

ಅಮಾನತು ಕೂಡ ಮಾಡಿದೆ.ದೂರು ದಾಖಲಾಗುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತನಿಖೆಗೆ ತಂಡ ರಚನೆ ಮಾಡಿದ್ದರು.

ಈ ತಂಡ ಶಿಕ್ಷಕನ ಸ್ವಂತ ಊರು ಧಾರವಾಡ ತಾಲ್ಲೂಕಿನ ಅಮ್ಮಿನಭಾವಿಯಲ್ಲಿ ಶೋಧ ನಡೆಸಿ ಅಲ್ಲಿ ಒಂದಷ್ಟು ಮಾಹಿತಿ ಕಲೆಹಾಕಿತ್ತು.

‘ಶಿಕ್ಷಕ ಬೇರೆ ಮಹಿಳೆಯರ ಜೊತೆಗೂ ಅಸಭ್ಯವಾಗಿ ನಡೆದು ಕೊಂಡ ಬಗ್ಗೆ ಮೊದಲಿನಿಂದಲೂ ದೂರುಗಳು ಕೇಳಿ ಬಂದಿದ್ದವು. ಆದರೆ, ಯಾರೂ ಲಿಖಿತವಾಗಿ ದೂರು ದಾಖಲಿಸಿರಲಿಲ್ಲ. ಮಹಿಳೆಯೊಬ್ಬರು ಈಗ
ದೂರು ನೀಡಿದ್ದು, ಅದರ ಆಧಾರದ ಮೇಲೆ ಶಿಕ್ಷಕನನ್ನು ಗೋವಾ ಸಮೀಪ ಬಂಧಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT