ಸಿಂಧನೂರು: ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ಮುಂದಿನ ಐದು ವರ್ಷಗಳಿಗೆ ಹೊಸ ಆಡಳಿತ ಮಂಡಳಿ ಆಯ್ಕೆ ಮಾಡುವ ಹಿನ್ನಲೆಯಲ್ಲಿ ಏಪ್ರಿಲ್ 11ರಂದು ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಪಂಪನಗೌಡ ತಾವರಗೇರಾ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘1991 ರಲ್ಲಿ ವೀರಶೈವ ಲಿಂಗಾಯತ ಸಮಾಜ ಸ್ಥಾಪನೆಯಾಗಿದ್ದು, ಇದುವರೆಗೂ ಚುನಾವಣೆಯೇ ಆಗಿಲ್ಲ. ಇತ್ತೀಚೆಗೆ ವೀರಶೈವ ಕಲ್ಯಾಣ ಮಂಟಪದ ಆವರಣದಲ್ಲಿ ಸದಸ್ಯರ ವಿಶೇಷ ಸಾಮಾನ್ಯ ಸಭೆ ನಡೆಸಿ ಮೊಟ್ಟಮೊದಲ ಬಾರಿಗೆ ಚುನಾವಣೆ ನಡೆಸಲು ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. ಒಟ್ಟು 1,611 ಜನರು ಸದಸ್ಯತ್ವ ಪಡೆದಿದ್ದು, ಕೋಟೆ ವೀರಣ್ಣ ದೇವಸ್ಥಾನದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಲಿದೆ’ ಎಂದು ಹೇಳಿದರು.

ನಿವೃತ್ತ ಉಪಪ್ರಾಚಾರ್ಯ ಬಿ.ರವಿಯಪ್ಪ ಅವರನ್ನು ಚುನಾವಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸಂಘದ ಬೈಲಾ ಪ್ರಕಾರ ಚುನಾವಣೆಯ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದು ವಿವರಿಸಿದರು.

ಮಾ.30 ಮತ್ತು 31ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಾಮಪತ್ರ ಸಲ್ಲಿಕೆ, ಏ.1 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನಾಮಪತ್ರ ಪರಿಶೀಲನೆ, ಏ.3 ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ಅವಕಾಶ, ಏ.11 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಅವಶ್ಯವಿದ್ದಲ್ಲಿ ಮತದಾನ, ಸಂಜೆ 4.30ರಿಂದ ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ನಡೆಯಲಿದೆ ಎಂದರು.

ಸಂಘದ ಉಪಾಧ್ಯಕ್ಷ ವೀರೇಂದ್ರ ಪ್ರಸಾದ ಮೇರಿನಾಳ, ಕಾರ್ಯದರ್ಶಿ ಅಮರೇಶಪ್ಪ ಕುಂಬಾರ, ಸಹ ಕಾರ್ಯದರ್ಶಿ ಎಲ್.ಅಮರೇಶಪ್ಪ, ಖಜಾಂಚಿ ಹಂಪಯ್ಯಸ್ವಾಮಿ ರ್ಯಾವಿಹಾಳ, ಸದಸ್ಯರಾದ ರಾಜಶೇಖರ, ಅಶೋಕಗೌಡ, ಟಿ.ಎನ್.ಪಾಟೀಲ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-32-1691020528

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.