ರಾಯಚೂರು: ಸುಪ್ರೀಂ ಕೋರ್ಟ್ ಆದೇಶ ಹಾಗೂ ಸ್ವತಂತ್ರ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಕರ್ನಾಟಕದಲ್ಲಿ ಎಸ್ಐಆರ್ ಜಾರಿಗೊಳಿಸಬಾರದು. ಜೊತೆಗೆ ಪಾರದರ್ಶಕ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಬೇಕು ಎಂದು ಒತ್ತಾಯಿಸಿ ನಮ್ಮ ಮತ, ನನ್ನ ಹಕ್ಕು ಜಿಲ್ಲಾ ಸಮಿತಿ ಪದಾಧಿಕಾರಿಗಳು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಮನವಿ ಸಲ್ಲಿಸಿದರು.

ಎಸ್ಐಆರ್ ಪ್ರಕ್ರಿಯೆಯಿಂದ ದೇಶದಾದ್ಯಂತ ಕೋಟ್ಯಂತರ ಜನರು ತಮ್ಮ ಸಂವಿಧಾನಬದ್ಧ ಮತದಾನದ ಹಕ್ಕು ಕಳೆದುಕೊಳ್ಳುವ ಅಪಾಯ ಎದುರಿಸುತ್ತಿದ್ದು, ವಿಶೇಷವಾಗಿ ಮಹಿಳೆಯರು, ವಲಸೆ ಕಾರ್ಮಿಕರು, ದಲಿತರು, ಆದಿವಾಸಿಗಳು, ಟ್ರಾನ್ಸ್ಜೆಂಡರ್ ಸಮುದಾಯದವರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ಇದರ ದುಷ್ಪರಿಣಾಮ ಹೆಚ್ಚು ಬೀರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ, ಚುನಾವಣಾಧಿಕಾರಿಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಜನರ ಆತಂಕಗಳಿಗೆ ಸ್ಪಷ್ಟನೆ ನೀಡಬೇಕು. ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಶಿಬಿರಗಳನ್ನು ಆಯೋಜಿಸಿ ಅಗತ್ಯ ದಾಖಲೆಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ದಿನಗಳಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕು ಕಳೆದುಕೊಂಡರೆ ಸಂಬಂಧಿತ ಜಿಲ್ಲಾ ಚುನಾವಣಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ನಾಗರಾಜ್ ಪೂಜಾರ್, ಮುಖಂಡರಾದ ಅಜೀಜ್ ಜಾಗೀರ್ದಾರ್, ಜಿಲಾನಿ ಯರಿಗೇರಾ, ಭೀಮಯ್ಯ, ಮಹೇಂದ್ರ, ಪ್ರಹ್ಲಾದ್, ಜಗದೀಶ್, ಹನೀಫ್ ಅಬಕಾರಿ, ಲಕ್ಷ್ಮಣ, ರಾಮಸ್ವಾಮಿ, ಮಾರಣ್ಣ, ನರಸಿಂಹಲು, ಸಣ್ಣ ನರಸಪ್ಪ, ಯಲ್ಲಪ್ಪ ಸೇರಿದಂತೆ ಉಪಸ್ಥಿತರಿದ್ದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-393271911

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.