ರಾಯಚೂರು: ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಕಳೆದ ವರ್ಷ 32ನೇ ಸ್ಥಾನಕ್ಕೆ ಕುಸಿದು ಅತ್ಯಂತ ಕಳಪೆ ಸಾಧನೆ ತೋರಿದ್ದ ರಾಯಚೂರು ಜಿಲ್ಲೆ ಈ ಬಾರಿ ರಾಜ್ಯದ ಜಿಲ್ಲೆಗಳ ಸಾಲಿನಲ್ಲಿ 21ನೇ ಸ್ಥಾನದಲ್ಲಿ ಗುರುತಿಸಿಕೊಂಡು ಪ್ರಗತಿ ಸಾಧಿಸಿದೆ.

ಪರಿಶ್ರಮ ಪಟ್ಟರೆ ಸಾಧನೆ ಸಾಧ್ಯ ಎನ್ನುವುದನ್ನು ನಿರೂಪಿಸಿದೆ. ಮಾನ್ವಿಯ ವಿದ್ಯಾರ್ಥಿ ಸುಖದೇವ ಕಟ್ಟಿಮನಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದು ಜಿಲ್ಲೆಯ ಗೌರವ ಹೆಚ್ಚಿಸಿದ್ದಾರೆ.

‘ರಾಯಚೂರು ಜಿಲ್ಲೆ ಶೇಕಡ 42.36ರಷ್ಟು ಪ್ರಗತಿ ಸಾಧಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆ 1, 2, 3ರಲ್ಲೂ ಶೇಕಡ 75ರಷ್ಟು ಸುಧಾರಣೆ ಕಂಡು ಬಂದಿದೆ. ಪರೀಕ್ಷೆಗೆ 27,757 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 26,205 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡ 94.41ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಕೆ.ಡಿಬಡಿಗೇರ ತಿಳಿಸಿದ್ದಾರೆ.

ಕಲಬುರಗಿ ವಿಭಾಗದ ಏಳು ಜಿಲ್ಲೆಗಳಲ್ಲಿ ವಿಜಯನಗರ ಜಿಲ್ಲೆ ಶೇಕಡ 96.39ರಷ್ಟು ಫಲಿತಾಂಶ ಪಡೆದು ಮೊದಲ ಸ್ಥಾನದಲ್ಲಿದ್ದರೆ, ಶೇಕಡ 94.41 ರಷ್ಟು ಫಲಿತಾಂಶ ಪಡೆದ ರಾಯಚೂರು ಜಿಲ್ಲೆ ಎರಡನೇ ಸ್ಥಾನದಲ್ಲಿದೆ. 93.35 ರಷ್ಟು ಫಲಿತಾಂಶ ಪಡೆದ ಬಳ್ಳಾರಿ ಜಿಲ್ಲೆ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

2017ರಲ್ಲಿ ಶೇ.69.69ರಷ್ಟು ಫಲಿತಾಂಶ ಬಂದಿತ್ತು. 2018ರಲ್ಲಿ ಶೇ.68.89ಕ್ಕೆ ಕುಸಿಯಿತು. 2018ರಲ್ಲಿ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ 30ನೇ ಸ್ಥಾನದಲ್ಲಿದ್ದ ರಾಯಚೂರು ಜಿಲ್ಲೆ2019ರಲ್ಲಿ 29ನೇ ಸ್ಥಾನಕ್ಕೆ ಏರಿತ್ತು. 2022ರಲ್ಲಿ 32ನೇ ಸ್ಥಾನ, 2023ರಲ್ಲಿ ಶೇ84.02 ಫಲಿತಾಂಶ ಪಡೆದು 30ನೇ ಸ್ಥಾನ, 2024ರಲ್ಲಿ ಶೇ63.49ರಷ್ಟು ಫಲಿತಾಂಶ ಪಡೆದು 31ನೇ ಸ್ಥಾನದಲ್ಲಿ ಇತ್ತು. 2025ರಲ್ಲಿ ಶೇಕಡ 42.36 ಫಲಿತಾಂಶ ಪಡೆದು 32ನೇ ಸ್ಥಾನಕ್ಕೆ ಕುಸಿದಿತ್ತು.

‘ಕಳೆದ ವರ್ಷ ಒಂದೇ ವರ್ಷದ ಅವಧಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಮೂವರು ಉಪ ನಿರ್ದೇಶಕರು ವರ್ಗವಾಗಿ ಹೋಗಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಉಪ ನಿರ್ದೇಶಕರು ಸ್ಥಿರವಾಗಿ ಉಳಿದಿದ್ದರಿಂದ ಹಾಗೂ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಹಾಗೂ ನಿರ್ದೇಶಕರು ರಾಯಚೂರು ಜಿಲ್ಲೆಗೆ ಬಂದು ವಿಶೇಷ ಕಾರ್ಯಾಗಾರ ನಡೆಸಿದ ಕಾರಣ ಫಲಿತಾಂಶದಲ್ಲಿ ಸುಧಾರಣೆ ಕಾಣಲು ಸಾಧ್ಯವಾಗಿದೆ‘ ಎಂದು ಶಿಕ್ಷಣ ತಜ್ಞ ಹಫಿಜುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.