ರಾಯಚೂರು: ‘ನಗರದಲ್ಲಿ ಬಿಸಿಲಿನ ತಾಪದಿಂದ ಬಳಲುತ್ತ ಬೀದಿಯಲ್ಲಿ ಸಂಚರಿಸುವ ಗೋವುಗಳನ್ನು ರಕ್ಷಣೆ ಮಾಡಬೇಕು’ ಎಂದು ಒತ್ತಾಯಿಸಿ ಶಿವಸೇನಾ ಕರ್ನಾಟಕ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ನಗರದಲ್ಲಿ ಬಿಸಿಲಿನ ತಾಪ ವಿಪರೀತವಾಗಿ ಏರುತ್ತಿದೆ. ತೀವ್ರ ಶಾಖದಿಂದಾಗಿ ನಗರದ ಬೀದಿಗಳಲ್ಲಿ ಅಲೆಯುವ ಗೋವುಗಳು ‘ಸನ್ ಸ್ಟ್ರೋಕ್’ಗೆ ಒಳಗಾಗಿ ಪ್ರಾಣ ಕಳೆದುಕೊಳ್ಳುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿ’ ಎಂದು ಅಸಮಾಧಾನ ಹೊರಹಾಕಿದರು.

‘ರಸ್ತೆಗಳ ಮಧ್ಯೆ ಗೋವುಗಳು ಅಲೆಯುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ’ ಎಂದರು.

‘ಬೀದಿಯಲ್ಲಿ ಅಲೆಯುತ್ತಿರುವ ಗೋವುಗಳನ್ನು ತಕ್ಷಣವೇ ಗುರುತಿಸಿ ಅವುಗಳ ಮಾಲೀಕರಿಗೆ ಹಸ್ತಾಂತರಿಸಬೇಕು. ಅನಾಥ ಗೋವುಗಳನ್ನು ಸರ್ಕಾರಿ ಗೋಶಾಲೆಗಳಿಗೆ ಸ್ಥಳಾಂತರಿಸಬೇಕು’ ಎಂದು ಆಗ್ರಹಿಸಿದರು.

ಶಿವಸೇನಾ ಕರ್ನಾಟಕ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ ಮಡಿವಾಳ, ಮಂಜುನಾಥ, ಸುರೇಶ, ಮುರಳಿ, ವೀರೇಶ, ರಾಜಚಂದ್ರ ಹಾಗೂ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-32-1916367403

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.