ರಾಯಚೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ಈಚೆಗೆ ಒಂದೇ ದಿನ ಮೂರು ಪ್ರತ್ಯೇಕ ಪ್ರದೇಶಗಳಲ್ಲಿ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ.

ಯರಮರಸ್ ಪ್ರದೇಶದ ಅರ್ಫತಲಿ (4), ಬೋಳಮಂಡಿ ರಸ್ತೆಯ ಕಲ್ಯಾಣಿ (8) ಹಾಗೂ ಹರಿಜನ ವಾರ್ಡ್ನ ರಿಯಾ (10) ಎಂಬ ಮಕ್ಕಳು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳು ಮಕ್ಕಳಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಾಲಕನನ್ನು ಬೀದಿನಾಯಿ ಎಳೆದಾಡಿ ಮನಸ್ಸೋ ಇಚ್ಛೆ ಕಚ್ಚಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೋಷಕರು ಸಮಯಕ್ಕೆ ಸರಿಯಾಗಿ ಬಾರದೇ ಇದ್ದರೆ ಬಾಲಕನ ಜೀವಕ್ಕೆ ಅಪಾಯ ಉಂಟಾಗಬಹುದಿತ್ತು ಎನ್ನಲಾಗಿದೆ.

ಘಟನೆಗಳ ಬಳಿಕ ಪೋಷಕರು ತೀವ್ರ ಆತಂಕ ವ್ಯಕ್ತಪಡಿಸಿದ್ದು ಮಕ್ಕಳನ್ನು ಮನೆ ಹೊರಗೆ ಆಟಕ್ಕೆ ಕಳುಹಿಸಲು ಸಹ ಭಯಪಡುತ್ತಿರುವುದಾಗಿ ಹೇಳಿದ್ದಾರೆ. ಬೇಸಿಗೆ ರಜೆ ಹಿನ್ನೆಲೆ ಮಕ್ಕಳು ಹೊರಗಡೆ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ.

ರಾಯಚೂರು ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆ, ತಕ್ಷಣ ಕ್ರಮ ಕೈಗೊಂಡು ನಾಯಿಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-1442145816

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.