ರಾಯಚೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ನಾಯಿ ಕಡಿತ ಪ್ರಕರಣಗಳ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 1,139 ನಾಯಿ ಕಡಿತ ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಮಕ್ಕಳು ಹಾಗೂ ವಯೋವೃದ್ಧರು ಹೆಚ್ಚಾಗಿ ನಾಯಿಗಳ ದಾಳಿಗೆ ಗುರಿಯಾಗುತ್ತಿದ್ದು, ಜನರು ರಸ್ತೆಗಳಲ್ಲಿ ಸಂಚರಿಸಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. 2026ರ ಜನವರಿಯಿಂದ ಏಪ್ರಿಲ್ ಅಂತ್ಯದವರೆಗೆ ದಾಖಲಾಗಿರುವ ಪ್ರಕರಣಗಳ ಪೈಕಿ ಮಕ್ಕಳ ಸಂಖ್ಯೆಯೇ ಹೆಚ್ಚಾಗಿದೆ ಎಂದು ರಿಮ್ಸ್ ಬೋಧಕ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತಿಂಗಳವಾರು ಅಂಕಿ-ಅಂಶಗಳ ಪ್ರಕಾರ ಜನವರಿಯಲ್ಲಿ 285, ಫೆಬ್ರುವರಿ 232, ಮಾರ್ಚ್ 257 ಹಾಗೂ ಏಪ್ರಿಲ್ನಲ್ಲಿ ಅತಿ ಹೆಚ್ಚು 365 ಪ್ರಕರಣಗಳು ದಾಖಲಾಗಿವೆ. ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣ ತಪ್ಪಿರುವುದರಿಂದ ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗಗಳಲ್ಲಿಯೂ ಜನರಲ್ಲಿ ಆತಂಕ ಹೆಚ್ಚಾಗಿದೆ.

ಇದಲ್ಲದೆ ನಾಯಿಗಳು ಆಡು, ಕುರಿ, ಹಸು ಹಾಗೂ ಕೋಳಿಗಳ ಮೇಲೂ ದಾಳಿ ನಡೆಸುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾಕುಪ್ರಾಣಿಗಳ ರಕ್ಷಣೆ ಕೂಡ ದೊಡ್ಡ ಸವಾಲಾಗಿ ಪರಿಣಮಿಸಿದೆ.

‘ನಾಯಿ ಕಡಿತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ರೇಬಿಸ್ ತಡೆಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ನಾಯಿ ಕಡಿತವನ್ನು ನಿರ್ಲಕ್ಷ್ಯ ಮಾಡದೆ ತಕ್ಷಣ ಚಿಕಿತ್ಸೆ ಪಡೆಯಬೇಕು‘ ಎಂದು ರಿಮ್ಸ್ ವೈದ್ಯಾಧಿಕಾರಿ ಡಾ. ನಸೀಮ್ ಬಾನು ಹೇಳುತ್ತಾರೆ.

‘ನಾಯಿ ಕಚ್ಚಿದ ತಕ್ಷಣ ಗಾಯವನ್ನು ಸೋಪು ಮತ್ತು ನೀರಿನಿಂದ ಚೆನ್ನಾಗಿ ತೊಳೆಯಬೇಕು. ಬಳಿಕ ನಂಜು ನಿರೋಧಕ ಹಚ್ಚಿ, ಅಗತ್ಯವಿದ್ದರೆ ಶುದ್ಧ ಬಟ್ಟೆಯಿಂದ ಕಟ್ಟಿಕೊಂಡು ಕೂಡಲೇ ಆಸ್ಪತ್ರೆಗೆ ತೆರಳಬೇಕು’ ಎಂದು ತಿಳಿಸುತ್ತಾರೆ.

ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳು ಬೀದಿ ನಾಯಿಗಳ ಸಂತಾನೋತ್ಪತ್ತಿ ನಿಯಂತ್ರಣ, ಲಸಿಕೆ ಕಾರ್ಯಕ್ರಮ, ನಾಯಿಗಳನ್ನು ಸುರಕ್ಷಿತವಾಗಿ ಹಿಡಿದು ಸ್ಥಳಾಂತರಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಒತ್ತಾಯಿಸುತ್ತಾರೆ ಕುಲಸುಂಬಿ ಕಾಲೊನಿಯ ನಿವಾಸಿ ಸುರೇಶ.

ಕಸ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ನಾಯಿಗಳ ಸಂಖ್ಯೆ ಹೆಚ್ಚುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕು ಎಂದು ಸುರೇಶ ಆಗ್ರಹಿಸುತ್ತಾರೆ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-32-49447699

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.