ರಾಯಚೂರು: ಸ್ವಚ್ಛ ಸರ್ವೇಕ್ಷಣ-2026ರ ಮೌಲ್ಯ ಮಾಪನದ ಅಡಿಯಲ್ಲಿ ಕಸ ಮುಕ್ತ ನಗರ 3 ಸ್ಟಾರ್ ರೇಟಿಂಗ್ಗೆ ರಾಯಚೂರು ಮಹಾನಗರ ಪಾಲಿಕೆಯು ಅರ್ಜಿ ಸಲ್ಲಿಸುತ್ತಿದ್ದು, ಸಾರ್ವಜನಿರು ಪಾಲಿಕೆಯೊಂದಿಗೆ ಕೈಜೋಡಿಸಬೇಕು ಎಂದು ಆಯುಕ್ತ ಜುಬಿನ್ ಮೊಹಾಪಾತ್ರ ಮನವಿ ಮಾಡಿದ್ದಾರೆ.

ಎಲ್ಲ ನಾಗರಿಕರು ಪರಿಣಾಮಕಾರಿ ಘನತ್ಯಾಜ್ಯ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸ್ವಚ್ಛತೆಯ ಮಾನದಂಡಗಳನ್ನು ಕಾಪಾಡಿಕೊಳ್ಳಲು ನಗರವು ಸಾಕಷ್ಟು ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಸ್ಥಾಪಿಸಿದೆ. ಸರಿಯಾದ ತ್ಯಾಜ್ಯ ವಿಂಗಡಣೆ ಪದ್ಧತಿಗಳನ್ನು ಅನುಸರಿಸುವ ಮೂಲಕ ಮತ್ತು ನಗರವನ್ನು ಸ್ವಚ್ಛ ಮತ್ತು ನೈರ್ಮಲ್ಯವಾಗಿಡಲು ಕೊಡುಗೆ ನೀಡಬೇಕು ಎಂದು ಕೋರಿದ್ದಾರೆ.

ಈ ಮೌಲ್ಯ ಮಾಪನ ಪ್ರಕ್ರಿಯೆಯಲ್ಲಿ ಮೂಲದಲ್ಲಿಯೇ ತ್ಯಾಜ್ಯ ವಿಂಗಡಣೆ ಕಡ್ಡಾಯವಾಗಿದ್ದು, ಮನೆಯಲ್ಲಿಯೇ ಒಣ ಕಸ ಮತ್ತು ಹಸಿ ಕಸವನ್ನು ಪ್ರತ್ಯೇಕವಾಗಿ ಎರಡು ಡಬ್ಬಗಳಲ್ಲಿ ಸಂಗ್ರಹಿಸಬೇಕು. ನಗರಸಭೆಯ ವಾಹನ ಬಂದಾಗ ಮಾತ್ರ ಹೊರಗಿಡಬೇಕು ಎಂದು ಹೇಳಿದ್ದಾರೆ.

ನಿಮ್ಮ ಸುತ್ತಮುತ್ತಲಿನಲ್ಲಿ ಕಸ ತುಂಬಿಕೊಂಡಿದ್ದರೆ, ಸಾರ್ವಜನಿಕ ಸ್ಥಳ ಅಶುದ್ಧವಾಗಿದ್ದರೆ, ಅದರ ಫೋಟೊ ತೆಗೆದು ಸ್ವಚ್ಛತಾ ಆ್ಯಪ್ ಅಥವಾ ಮೈಗವ್ ಆ್ಯಪ್ ಮೂಲಕ ದೂರು ನೀಡಬಹುದು ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-32-1461428621

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.