ನಗರದ ವಿವಿಧ ವೃತ್ತಗಳಲ್ಲಿ ಸೃಷ್ಟಿಯಾಗುತ್ತಿರುವ ಸಂಚಾರ ದಟ್ಟಣೆ ಕುರಿತು ಸಂಚಾರ ಪೊಲೀಸರಿಂದ ಮಾಹಿತಿ ಪಡೆದು, ಸಾರ್ವಜನಿಕರಿಗೆ ರಸ್ತೆ ಸಂಚಾರ ಸುಗಮವಾಗಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು
– ಅರುಣಾಂಗ್ಷು ಗಿರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ನಗರದಲ್ಲಿ ರಸ್ತೆಗಳು ಕಿರಿದಾಗಿರುವುದರಿಂದ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಅವಕಾಶ ಇಲ್ಲ. ಹಾಗಾಗಿ ಸಂಚಾರ ದಟ್ಟಣೆ ಕಂಡು ಬರುವ ಸ್ಥಳಗಳಲ್ಲಿ ಸಿಬ್ಬಂದಿ ನಿಯೋಜಿಸಲಾಗುತ್ತಿದೆ
– ಸಣ್ಣವೀರೇಶ, ಸಂಚಾರ ಪೊಲೀಸ್ ಸಬ್ ಇನ್‌ಸ್ಪೆಕ್ಟರ್
ನಗರದ ಹೊರಹೊಲಯದಲ್ಲಿ ಸಮರ್ಪಕ ರಿಂಗ್ ರಸ್ತೆ ವ್ಯವಸ್ಥೆ ಇಲ್ಲದಿರುವುದರಿಂದ ಬೃಹತ್ ಗಾತ್ರದ ವಾಹನಗಳು ನಗರ ಮಧ್ಯಭಾಗದಲ್ಲೇ ಸಂಚರಿಸುತ್ತಿದ್ದು, ಇದರಿಂದ ಸಂಚಾರ ದಟ್ಟಣೆ ಹೆಚ್ಚಿ ಅಪಘಾತ ಸಂಭವಿಸುತ್ತಿವೆ