ರಾಯಚೂರು: ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಜಿಲ್ಲೆಯ 18 ಗ್ರಾಮ ಪಂಚಾಯಿತಿಗಳು ಕ್ಷಯಮುಕ್ತ ಗ್ರಾಮ ಪಂಚಾಯಿಗಿ ಪ್ರಶಸ್ತಿಗೆ ಆಯ್ಕೆಯಾಗಿವೆ’ದೆ ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೃಷ್ಣ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ವಿಭಾಗದ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಷಯಮುಕ್ತ ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

‘ 2024 ರಲ್ಲಿ 7 ಗ್ರಾಮ ಪಂಚಾಯಿತಿಗಳು ಕಂಚಿನ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದವು. ಪ್ರಸ್ತುತ 2025 ರಲ್ಲಿ 18 ಗ್ರಾಮ ಪಂಚಾಯಿತಿಗಳು ಪೈಕಿ ಶಾವಂತಗೇರಾ ಗ್ರಾಮ ಪಂಚಾಯಿಗಿ ಬೆಳ್ಳಿ ಪದಕ ಹಾಗೂ ಇತರೆ 17 ಗ್ರಾಮ ಪಂಚಾಯಿತಿಗಳು ಕಂಚಿನ ಪದಕಕ್ಕೆ ಆಯ್ಕೆಯಾಗಿವೆ’ ಎಂದು ತಿಳಿಸಿದರು.

‘ಬಡವ, ಸಿರಿವಂತ, ಹೆಣ್ಣು-ಗಂಡು ಎಂಬ ಬೇಧವಿಲ್ಲದೆ ದೇಹದ ಉಗುರು ಹಾಗೂ ಕೂದಲು ಹೊರತುಪಡಿಸಿ ಎಲ್ಲ ಅಂಗಗಳಿಗೆ ಕ್ಷಯರೋಗ ಬರುತ್ತದೆ. ಆರ್ಥಿಕ ದುರ್ಬಲರಿಗೆ ನಿಕ್ಷಯಮಿತ್ರ ಯೋಜನೆಯಡಿ ದಾನಿಗಳಿಂದ ಪೌಷ್ಟಿಕಾಹಾರ ಕಿಟ್ ಒದಗಿಸಲಾಗುತ್ತಿದೆ. ಈ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತವಾಗಿದೆ’ ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಮಹಮ್ಮದ್ ಶಾಕೀರ್ ಮೊಹಿಯುದ್ದೀನ್ ಮಾತನಾಡಿದರು.

ಪ್ರಶಸ್ತಿ ಪಡೆದ ಗ್ರಾಮ ಪಂಚಾಯಿತಿಗಳು: ಲಿಂಗಸುಗೂರು ತಾಲ್ಲೂಕಿನ ಬನ್ನಿಗೊಳ, ಹಲಕವಟಗಿ, ನಾಗರಾಳ, ನರಕಲದಿನ್ನಿ, ಉಪ್ಪಾರನಂದಿಹಾಳ, ಸಿಂಧನೂರು ತಾಲ್ಲೂಕಿನ ಚನ್ನಳ್ಳಿ, ದೇವರಗುಡಿ, ಗೋನವಾರ, ಆರ್ ಎಚ್ ನಂಬರ್-2, ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ, ದಿಗ್ಗನಾಯಕನಭಾವಿ, ಮಟ್ಟೂರು, ದೇವದುರ್ಗ ತಾಲ್ಲೂಕಿನ ಶಾವಂತಗೇರಾ, ಆಲ್ಕೋಡ್, ಹಿರೇಬೂದುರು, ಮಾನ್ವಿ ತಾಲ್ಲೂಕಿನ ಪೋತ್ನಾಳ, ಸಿರವಾರ ತಾಲ್ಲೂಕಿನ ಪಾಮನಕಲ್ಲೂರು, ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮ ಪಂಚಾಯಿತಿ ಪ್ರಶಸ್ತಿ ಪಡೆದುಕೊಂಡಿವೆ.

ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಗಣೇಶ ಕೆ, ಡಿಪಿಡಿಒ ಡಾ.ಚಂದ್ರಶೇಖರಯ್ಯ ಸ್ವಾಮಿ, ನವೋದಯ ವೈದ್ಯಕೀಯ ಮಹಾವಿದ್ಯಾಲಯದ ಪಿಎಸ್ಎಮ್ ವಿಭಾಗದ ಡಾ.ರೂಪಕಲಾ, ಡಾ.ಪ್ರತಿಭಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್ ದಾಸಪ್ಪನವರ, ಜಿಲ್ಲಾ ಕಾರ್ಯಕ್ರಮ ಸಂಯೋಜಕ ಅಮರೇಶ ಕುಮಾರ, ಡಿಪಿಪಿಎಂಸಿ ಮೊಹಿನ್ ಪಾಶಾ, ಜಿಲ್ಲಾ ಏಡ್ಸ್ ಮೇಲ್ವಿಚಾರಕ ಮಲ್ಲಯ್ಯ ಮಠಪತಿ, ಸಿಪಿಓ ಬಸವರಾಜಗೌಡ ಸೇರಿದಂತೆ ವೈದ್ಯರು, ವಿವಿಧ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಎಸ್ಟಿಎಸ್, ಎಸ್ಟಿಎಲ್ಎಸ್, ಟಿಬಿ ವಿಭಾಗ, ಏಡ್ಸ್ ವಿಭಾಗದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.