ರಾಯಚೂರು: ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕೆಲಸ ಅತ್ಯಂತ ಮಹತ್ವದ್ದಾಗಿದೆ ಎಂದು ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಹೇಳಿದರು.

ತಾಲ್ಲೂಕಿನ ಯರಗೇರಾದಲ್ಲಿ ಸ್ಥಾಪಿತವಾದ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (ಎಐಸಿಸಿಟಿಯು ಸಂಯೋಜಿತ) ಆರ್ಡಿಎಸ್ ಗಿಲ್ಲೆಸೂಗೂರು ಉಪವಿಭಾಗ ಸಮಿತಿಯ ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು.

ತುಂಗಭದ್ರಾ ಕಾರ್ಮಿಕರ ಶ್ರಮದಿಂದಲೇ ಸಾವಿರಾರು ರೈತರ ಜಮೀನಿಗೆ ನೀರು ತಲುಪುತ್ತಿದೆ. ತುಂಗಭದ್ರಾ ಜಲಾಶಯದ ಪ್ರಮುಖ ಉದ್ದೇಶವೇ ರೈತರ ಕೃಷಿ ಭೂಮಿಗೆ ಸಮರ್ಪಕವಾಗಿ ನೀರು ಹರಿಸುವುದಾಗಿದೆ ಎಂದು ತಿಳಿಸಿದರು.

ಕಾರ್ಮಿಕರು ನೀರಾವರಿ ವ್ಯವಸ್ಥೆಯ ಬೆನ್ನೆಲುಬಾಗಿದ್ದು, ಅವರ ಹಕ್ಕುಗಳು ಹಾಗೂ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟಿತ ಹೋರಾಟ ಅಗತ್ಯ ಎಂದರು.

ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ ಮಾತನಾಡಿ,‘ ತುಂಗಭದ್ರಾ ನೀರಾವರಿ ಕಾರ್ಮಿಕರ ಹೋರಾಟ ಸರ್ಕಾರ ಹಾಗೂ ಕಾನೂನು ಹೋರಾಟದ ಮೂಲಕ ಮುಂದುವರಿದಿದೆ’ ಎಂದು ಹೇಳಿದರು.

ಇತ್ತೀಚಿಗೆ ಹತ್ತಕ್ಕೂ ಹೆಚ್ಚು ಕಾರ್ಮಿಕರ ಪರವಾಗಿ ಕಾರ್ಮಿಕ ನ್ಯಾಯಾಲಯದಿಂದ ಆದೇಶಗಳನ್ನು ಪಡೆಯಲಾಗಿದೆ. ತುಂಗಭದ್ರಾ ನೀರಾವರಿ ಕಾರ್ಮಿಕರನ್ನು ಕಾಯಂ ಕೆಲಸಗಾರರೆಂದು ಪರಿಗಣಿಸುವಂತೆ ಕೋರಿ ಕಾರ್ಮಿಕ ನ್ಯಾಯಾಲಯದ ಮೊರೆ ಹೋಗಲಾಗಿದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ ಎಂದು ಅವರು ತಿಳಿಸಿದರು.

ಕಾರ್ಮಿಕರು ಯಾವುದೇ ಗೊಂದಲಕ್ಕೆ ಒಳಗಾಗದೆ ರೈತರ ಜಮೀನಿಗೆ ನೀರು ಹರಿಸುವ ಕೆಲಸವನ್ನು ಜವಾಬ್ದಾರಿಯಿಂದ ನಿರಂತರವಾಗಿ ನಿರ್ವಹಿಸಬೇಕು ಎಂದರು.

ನಾಗರಾಜ ಪೂಜಾರ್, ಸಂಘದ ಪದಾಧಿಕಾರಿಗಳಾದ ಎಂ.ಬಸವರಾಜ, ಅಜೀಜ್ ಜಾಗೀರದಾರ್, ಭೀಮಯ್ಯ ಉಡುಂಗಲ್, ನಿಸಾರ್ ಅಹಮದ್, ಜಗದೀಶ್, ಈರಣ್ಣ ಅನ್ವರ್, ಜಿಲಾನಿ ಪಾಷಾ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-32-107558577

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.