ಪಜಾವಾಣಿ ವಾರ್ತೆ

ರಾಯಚೂರು: ಶ್ರೀ ಮಾಧ್ವ ರಾದ್ಧಾಂತ ಸಂವರ್ಧಕ ಸಭಾ, ಶ್ರೀ ಭಾಗವತಾಶ್ರಮ ಪ್ರತಿಷ್ಠಾನ ಮತ್ತು ಲೋಕ ಸಂಸ್ಕೃತಿ ಕಲಾ ವಿದ್ಯಾ ವಿಕಾಸ ಪ್ರತಿಷ್ಠಾನದ ಆಶ್ರಯದಲ್ಲಿ ವೇದವ್ಯಾಸ ಜಯಂತಿ, ಮಾಧ್ವ ರಾದ್ಧಾಂತ ಸಂವರ್ಧಕ ಸಭಾ 84ನೇ ಅಧಿವೇಶನ ಮತ್ತು ಶ್ರೀ ವಿದ್ಯಾಮಾನ್ಯ ತೀರ್ಥರ 26ನೇ ಆರಾಧನೋತ್ಸವ ಏ. 28ರ ಸಂಜೆ 5ಗಂಟೆಗೆ ಇಲ್ಲಿಯ ಮುಂಗ್ಲಿ ಮುಖ್ಯಪ್ರಾಣ ದೇವರ ಗುಡಿ ಸಭಾಂಗಣದಲ್ಲಿ ನಡೆಯಲಿದೆ.

ಉಡುಪಿ ಶ್ರೀ ಭಂಡಾರಕೇರಿ ಮಠ ಕೊಡುವ ಪ್ರತಿಷ್ಠಿತ ವಾರ್ಷಿಕ ರಾಷ್ಟ್ರೀಯ ಪ್ರಶಸ್ತಿಗೆ ಈ ಬಾರಿ ಚೆನ್ನೈನ ವೇದ ರಕ್ಷಣಾ ನಿಧಿ ಟ್ರಸ್ಟ್ , ಹಿರಿಯ ವಿದ್ವಾಂಸ ಹೈದರಾಬಾದ್ನ ವೇದವ್ಯಾಸ ವಿದ್ಯಾಪೀಠದ ಪಂಡಿತ ಚಿಟಗುಪ್ಪ ಪದ್ಮನಾಭ ಆಚಾರ್ಯ, ಬಾಗಲಕೋಟೆಯ ವಿದ್ವಾನ್ ನಾಗಸಂಪಿಗೆ ರಘೂತ್ತಮ ಆಚಾರ್ಯ ಹಾಗೂ ಮೈಸೂರಿನ ಅಭೃಂಣೀ ಗುರುಕುಲದ ವಿದ್ವಾನ್ ಬೆಮ್ಮತ್ತಿ ವಿಜಯೀಂದ್ರಾಚಾರ್ಯ ಭಾಜನರಾಗಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-32-1021396018

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.