ಕವಿತಾಳ: ಸಮೀಪದ ಪಾಮನಕಲ್ಲೂರು ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ಅಪೂರ್ಣವಾಗಿರುವುದು ಮತ್ತು ಸತತ ಮಳೆಯಿಂದ ಓಣಿಗಳಲ್ಲಿ ರಸ್ತೆಗಳು ಹದಗೆಟ್ಟಿವೆ.

ರಸ್ತೆಯಲ್ಲಿ ನೀರು ನಿಂತು ಸೊಳ್ಳೆ ಕಾಟ ಹೆಚ್ಚಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಕಾಡುತ್ತಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದರು.

ಗ್ರಾಮದ ಜನತಾ ಕಾಲೊನಿಯಲ್ಲಿ ಜೆಜೆಎಂ ಕಾಮಗಾರಿ ಹಿನ್ನೆಲೆಯಲ್ಲಿ ಪೈಪ್ ಅಳವಡಿಸಲು ತೆಗೆದ ಜಾಗದಲ್ಲಿ ಮಣ್ಣು ತುಂಬಲಾಗಿದೆ. ಮೇಲೆ ಕಾಂಕ್ರೀಟ್ ಹಾಕದ ಕಾರಣ ತಗ್ಗಿನಲ್ಲಿ ನೀರು ನಿಂತು ಗಲೀಜು ಸೃಷ್ಟಿಯಾಗಿದೆ.

ಶಾಲಾ ಪಕ್ಕದಲ್ಲಿಯೇ ರಸ್ತೆ ಹಾದು ಹೋಗಿದೆ ಈ ರಸ್ತೆಯಲ್ಲಿ ಓಡಾಡುವ ಶಾಲಾ ಮಕ್ಕಳು ಹಾಗೂ ಓಣಿಯ ನಿವಾಸಿಗಳು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

‘ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಸ್ತೆ ಹದಗೆಟ್ಟ ಬಗ್ಗೆ ಮಾಹಿತಿ ನೀಡಲಾಗಿತ್ತು. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ ಅವರಿಗೂ ಮಾಹಿತಿ ನೀಡಲಾಗಿದೆ. ಆದರೂ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿಲ್ಲ’ ಎಂದು ಕರವೇ ಮುಖಂಡ ಲಕ್ಷ್ಮಣ ಚೌಡ್ಲಿ ಆರೋಪಿಸಿದರು.

ಈ ಬಗ್ಗೆ ಜೆಜೆಎಂ ಎಂಜಿನಿಯರ್ಗೆ ಮಾಹಿತಿ ನೀಡಲಾಗಿದೆ. ರಸ್ತೆ ತಾತ್ಕಾಲಿಕ ಮತ್ತು ಶೀಘ್ರ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು
ಅಮರೇಶ ಯಾದವ ತಾ.ಪಂ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.