ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಯಚೂರು ವಿವಿ ಕಾರ್ಯಾರಂಭ: ಅಶ್ವತ್ಥ ನಾರಾಯಣ

Last Updated 25 ಫೆಬ್ರುವರಿ 2020, 7:36 IST
ಅಕ್ಷರ ಗಾತ್ರ

ರಾಯಚೂರು: ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇರಾಯಚೂರು ವಿಶ್ವವಿದ್ಯಾಲಯ ಕಾರ್ಯಾರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಪ್ರಸ್ತಾಪಿತ ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ವಿವಿಧ ವಿಭಾಗೀಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಶ್ವವಿದ್ಯಾಲಯದ ಸ್ಥಾಪನೆಗೆ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಲಾಗುತ್ತಿದ್ದು, ಕಾರಣಾಂತರಗಳಿಂದ ಬೇಡಿಕೆಯನ್ನು ನಿರಾಕರಿಸಲಾಗಿತ್ತು. ಈ ನಿಟ್ಟಿನಲ್ಲಿ ಈಗಾಗಲೇ ವಿಧಾನಸೌಧದಲ್ಲಿ ಈ ಕುರಿತು ವಿಷಯವನ್ನು ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ ಎಂದರು.

ವಿಶ್ವವಿದ್ಯಾಲಯ ಸ್ಥಾಪನೆಯಾದರೆ ಹಿಂದುಳಿದ ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ವಿಶ್ವವಿದ್ಯಾಯದ ವಿಶೇಷ ಅಧಿಕಾರಿ ಮುಜಾಫರ್ ಅಸಾದಿ ಹೇಳಿದರು.

ಭವಿಷ್ಯದ ಅಗತ್ಯಗಳನ್ನು ಆಧರಿಸಿ 300 ಎಕರೆ ಪ್ರದೇಶದಲ್ಲಿ ವಿವಿ ನಿರ್ಮಾಣವಾಗಬೇಕಾಗಿದೆ. ವಿವಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಒದಗಿಸಬೇಕೆಂದು ಸರ್ಕಾರಕ್ಕೆ ಬೇಡಿಕೆ ನೀಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಸಂಸದ ರಾಜಾ ವೆಂಕಟಪ್ಪ ನಾಯಕ, ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಜಿಲ್ಲಾಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಗುಲಬರ್ಗಾ ವಿಶ್ವವಿದ್ಯಾಲಯ ಅಧಿಕಾರಿಗಳು, ವಿವಿಧ ವಿಭಾಗಗಳ ಅಧಿಕಾರಿಗಳು, ಶಿಕ್ಷಣ ಸಂಸ್ಥೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT