ರಾಯಚೂರು: 'ವೈವಿಧ್ಯಮಯ ಇತಿಹಾಸ, ವೈಭವ, ಕಲೆ, ಸಂಸ್ಕೃತಿಯನ್ನು ಹೊಂದಿರುವ ಈ ನಾಡಿನ ಹಿರಿಮೆಯನ್ನು ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಜಿಲ್ಲಾ ಉತ್ಸವಗಳು ಪೂರಕವಾಗಿವೆ' ಎಂದು ಜಿಲ್ಲಾ ಉಸ್ತುವಾರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ರಾಯಚೂರಿನ ಕೃಷಿ ವಿ.ವಿ. ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವನ್ನು ಡೋಲು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

'ಜನರ ಆಶಯ ಮತ್ತು ಅಪೇಕ್ಷೆಯಂತೆ ಇದೀಗ 22 ವರ್ಷಗಳ ಬಳಿಕ ರಾಯಚೂರು ಜಿಲ್ಲೆ ಉತ್ಸವವನ್ನು ಅತ್ಯಂತ ವಿಜೃಂಭಣೆಯಿAದ ಆಚರಿಸುತ್ತಿದ್ದೇವೆ. ರಾಯಚೂರು ಜಿಲ್ಲೆ ತನ್ನದೇ ಆದ ಇತಿಹಾಸ, ಪರಂಪರೆ, ವೈಭವವನ್ನು ಹೊಂದಿದ್ದು, ಅದೇ ವೈಭವವನ್ನು ಮರುಕಳಿಸುವಂತೆ ಮಾಡುವಲ್ಲಿ ಉತ್ಸವ ಯಶಸ್ವಿಯಾಗಿ ಪ್ರಾರಂಭಗೊAಡಿದೆ. ಇಡೀ ರಾಜ್ಯಕ್ಕೆ ಅನ್ನ, ವಿದ್ಯುತ್ ನೀಡುವ ಈ ನಾಡು, ತನ್ನದೆ ಆದ ಕಲೆ, ಸಾಹಿತ್ಯ ಹಾಗೂ ವೈಶಿಷ್ಟö್ಯವನ್ನು ಹೊಂದಿದೆ ಎಂದರು.

ಈ ಭಾಗದ ಸಂಗೀತ, ನೃತ್ಯ, ಗಾಯನ ಸೇರಿದಂತೆ ಹಲವಾರು ಕಲಾವಿದರಿಗೆ ತಮ್ಮ ಕಲೆಯನ್ನು ಪ್ರದರ್ಶಿಸಲು ಈ ಉತ್ಸವ ಒಂದು ವೇದಿಕೆಯನ್ನು ಕಲ್ಪಿಸುವ ಮೂಲಕ ಅವಕಾಶ ಒದಗಿಸಿಕೊಟ್ಟಿದೆ. ಉತ್ಸವ ನಡೆಯುವ ಮೂರೂ ದಿನಗಳು ಕೂಡ ವೈವಿಧ್ಯಮಯ ಸಾಂಸ್ಕೃತಿಕ ಕಲೆಗಳು ಜನರನ್ನು ರಂಜಿಸಲಿವೆ. ಜನರಲ್ಲಿ ನಾಡಿನ ಕಲೆ, ಇತಿಹಾಸ, ಸಂಸ್ಕೃತಿಯನ್ನು ಪರಿಚಯಿಸುವಂತಹ ಕಾರ್ಯವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಎಲ್ಲರೂ ಕೂಡ ಸಂಭ್ರಮದಿಂದ ರಾಯಚೂರು ಜಿಲ್ಲಾ ಉತ್ಸವವನ್ನು ಆಸ್ವಾದಿಸಬೇಕು ಎಂದು ಮನವಿ ಮಾಡಿದರು.

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಕರ್ನಾಟಕ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರ ಬಸನಗೌಡ ದದ್ದಲ್ ಮಾತನಾಡಿದರು.

ವಿಧಾನಪರಿಷತ್ ಸದಸ್ಯ ಎ. ವಸಂತಕುಮಾರ, ರಾಜ್ಯ ಕೈಗಾರಿಕಾ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಹಂಪನಗೌಡ ಬಾದರ್ಲಿ, ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಮಾತನಾಡಿದರು. ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಶ್ರೇಷ್ಠ ಕೃಷಿಕರು ಹಾಗೂ ಕೃಷಿ ಮಹಿಳೆಯರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಪಾಮಯ್ಯ ಮುರಾರಿ, ತಾಲ್ಲೂಕು ಅಧ್ಯಕ್ಷ ಪವನ್ ಕಿಶೋರ್ ಪಾಟೀಲ್, ಕೃಷಿ ವಿವಿ ಕುಲಪತಿ ಡಾ. ಎಂ. ಹನುಮಂತಪ್ಪ, ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಜಿಲ್ಲಾಧಿಕಾರಿ ಕೆ. ನಿತೀಶ್, ಜಿ.ಪಂ. ಸಿಇಒ ಈಶ್ವರ್ ಕುಮಾರ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ರಾಯಚೂರು ಮಹಾನಗರಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಸ್ವಾಗತಿಸಿದರು. ಶಿಲ್ಪಾ ಮೆಡಿಕೇರ್ ಲಿಮಿಟೆಡ್ ಅಧ್ಯಕ್ಷ ವಿಷ್ಣುಕಾಂತ ಭುತಡ, ರೈಸ್ ಮಿಲ್ ಅಸೋಸಿಯೇಷನ್ ಅಧ್ಯಕ್ಷೆ ಸಾವಿತ್ರಿ ಪುರುಷೋತ್ತಮ ವಿಶೇಷ ಆಹ್ವಾನಿತರಾಗಿ ಪಾಲ್ಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.