ಹಟ್ಟಿ ಚಿನ್ನದ ಗಣಿ: ‘ವೀರಾಪೂರ ಗ್ರಾಮಕ್ಕೆ ಮೂಲ ಸೌಕರ್ಯ ಒದಗಿಸದೆ, ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಗೆಜ್ಜಲಗಟ್ಟಾ ಗ್ರಾ.ಪಂ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ತಾಲ್ಲೂಕು ಉಪಾಧ್ಯಕ್ಷ ನಿಂಗಪ್ಪ ವೀರಾಪೂರ ಮಾತನಾಡಿ,‘ವೀರಾಪೂರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕೇಳುವವರೆ ಇಲ್ಲದಂತಾಗಿದೆ. ಚರಂಡಿ ವ್ಯವಸ್ಧೆ ಇಲ್ಲದೆ ಚರಂಡಿ ನೀರು ಮಳೆ ನೀರು ಮನೆಯೊಳಗೆ ನುಗ್ಗುತ್ತಿದೆ. ಕೂಲಿ ಕಾರ್ಮಿಕರು ಉದ್ಯೋಗ ಇಲ್ಲದೆ ಪರದಾಡುತ್ತಿದ್ದಾರೆ. ನರೇಗಾ ಕಾರ್ಮಿಕರಿಗೆ ಗ್ರಾ.ಪಂ ಸಿಬ್ಬಂದಿ ಹಾಗೂ ಅಧಿಕಾರಿಗಳು ಕಡಿಮೆ ಕೂಲಿ ಜಮಾ ಮಾಡುತ್ತಿದ್ದಾರೆ’ ಎಂದು ದೂರಿದರು.

‘ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಉದ್ಯೋಗ ಒದಗಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು’ ಎಂದರು.

ಮೇಲಧಿಕಾರಿಗಳು ಇತ್ತ ಕಡೆ ಗಮನಹರಿಸಿ, ಸಮಸ್ಯೆ ಬಗೆಹರಿಸಬೇಕು. ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಗ್ರಾ.ಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಪಿಡಿಒಗೆ ಮನವಿ ಸಲ್ಲಿಸಲಾಯಿತು. ಪೆಚ್ಚಲಯ್ಯ, ಮಹಾಂತೇಶ, ಹಾಜಿಬಾಬಾ, ಹುಸೇನ್ ಸಾಬ್, ವೀರಮ್ಮ, ಬಸಮ್ಮ ದಿದ್ದಗಿ, ಗ್ರಾಮಸ್ಧರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-32-153563567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.