ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಧಿಕೃತ ಸ್ಥಳದಲ್ಲಿ ತರಕಾರಿ ಮಾರಾಟ ಸ್ಥಗಿತಕ್ಕೆ ಒತ್ತಾಯ

ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸಿದ ತರಕಾರಿ ವ್ಯಾಪಾರಿಗಳು
Last Updated 6 ಅಕ್ಟೋಬರ್ 2022, 13:29 IST
ಅಕ್ಷರ ಗಾತ್ರ

ರಾಯಚೂರು: ನಗರದ ಎಂ.ಈರಣ್ಣ ವೃತ್ತದಲ್ಲಿ ಅನಧಿಕೃತವಾಗಿ ತರಕಾರಿ ಮಾರಾಟ ಮಾಡುತ್ತಿರುವವರನ್ನು ಕೂಡಲೇ ರೈತ ಮಾರುಕಟ್ಟೆಗೆ ಸ್ಥಳಾಂತರಿಸುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಯಚೂರು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.

ಕೋವಿಡ್ ಮಹಾಮಾರಿ ಸಂದರ್ಭದಲ್ಲಿ ಜನಸಂದಣಿ ಏರ್ಪಡುವುದನ್ನು ತಪ್ಪಿಸುವುದಕ್ಕಾಗಿ ಎಂ.ಈರಣ್ಣ ವೃತ್ತದಲ್ಲಿ ತಾತ್ಕಾಲಿಕವಾಗಿ ತರಕಾರಿ ಮಾರಾಟಕ್ಕೆ ಜಿಲ್ಲಾಡಳಿತದ ಸೂಚನೆ ಅನುಸರಿಸಿ ಅವಕಾಶ ನೀಡಲಾಗಿತ್ತು. ಕೋವಿಡ್‌ ನಂತರವೂ ತರಕಾರ ಮಾರಾಟ ಮಾಡುವುದು ಮುಂದುವರಿಸಿದ್ದರಿಂದ ರೈತ ಮಾರುಕಟ್ಟೆ ನಿರ್ಮಾಣದ ಉದ್ದೇಶವು ಹಳ್ಳ ಹಿಡಿದಿದೆ. ನಗರಸಭೆ ಅಧಿಕಾರಿಗಳು ಈ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಪೌರಾಯುಕ್ತ ಕೆ.ಗುರುಲಿಂಗಪ್ಪ ಅವರಿಗೆ ಹಾಗೂ ಜಿಲ್ಲಾಡಳಿತಕ್ಕೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.

ಬಿಜೆಪಿ ಮುಖಂಡ ರವೀಂದ್ರ ಜಲ್ದಾರ್‌ ಸೇರಿದಂತೆ ಯಾವುದೇ ಜನಪ್ರತಿನಿಧಿಗಳ ಒತ್ತಡಕ್ಕೆ ನಗರಸಭೆ ಅಧಿಕಾರಿಗಳು ಮಣಿಯಬಾರದು. ನಗರಸಭೆಯು ಅಧಿಕೃತವಾಗಿ ಗುರುತಿಸಿದ ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮತ್ತು ರೈತ ಮಾರುಕಟ್ಟೆಗಳಲ್ಲಿ ಮಾತ್ರ ತರಕಾರಿ ಮಾರಾಟಕ್ಕೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

‘ಅನಧಿಕೃತವಾದ ಸ್ಥಳದಲ್ಲಿ ತರಕಾರಿ ಮಾರಾಟಕ್ಕೆ ಅವಕಾಶ ನೀಡುತ್ತಿರುವುದರಿಂದ ನಗರಸಭೆ ಆದಾಯವೂ ಕೈ ತಪ್ಪಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಮಟ್ಟದಲ್ಲಿಯೂ ಗಮನ ಸೆಳೆಯುವಂತೆ, ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು‘ ಎಂದು ಸಂಘದ ಅಧ್ಯಕ್ಷ ಎನ್‌.ಮಹಾವೀರ ತಿಳಿಸಿದರು.

ರಸ್ತೆಯ ಎರಡೂ ಬದಿಗಳಲ್ಲಿ ತರಕಾರಿ ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ. ವಾರ್ಡ್ ನಂಬರ್ 13ರ ನಗರಸಭೆಯ ಸದಸ್ಯೆ ಉಮಾ ಜಲ್ದಾರ್ ಅವರ ಪರವಾಗಿ ಅವರ ಪತಿ ರವಿ ಜಲ್ದಾರ್ ಅಧಿಕಾರ ಚಲಾಯಿಸಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರು ಆರೋಪಿಸಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ನಗರಸಭೆಯ ಸದಸ್ಯೆಯ ಪರವಾಗಿ ಆಡಳಿತ ನಡೆಸಿದ ಕಾರಣ ಸದಸ್ಯತ್ವ ರದ್ದುಪಡಿಸಿದಂತೆ ಇಲ್ಲಿಯೂ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಪದಾಧಿಕಾರಿಗಳಾದ ಪ್ರಭು ನಾಯಕ, ಖಾಜಪ್ಪ, ಉದಯಕುಮಾರ, ಮಹಮ್ಮದ್ ಇಕ್ಬಾಲ್, ನಿಸಾರ್ ಅಹ್ಮದ್, ಮಹಮ್ಮದ್ ಗೌಸ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT