ರಾಯಚೂರು: ಕುಡಿಯುವ ನೀರಿನ ಉದ್ದೇಶಕ್ಕಾಗಿಯೇ 10 ವರ್ಷಗಳ ಹಿಂದೆ ಅನುಷ್ಠಾನಗೊಳಿಸಿದ ಹಲವು ಯೋಜನೆಗಳು ಇಂದಿಗೂ ಪೂರ್ಣಗೊಂಡಿಲ್ಲ. ಜಲಜೀವನ ಮಿಷನ್ ಯೋಜನೆ ನೆಲಕಚ್ಚಿದೆ. ಕಳಪೆ ಕಾಮಗಾರಿಯಿಂದಾಗಿ ಓವರ್ಹೆಡ್ ಟ್ಯಾಂಕ್ಗಳು ಉದ್ಘಾಟನೆಗೆ ಮುನ್ನವೇ ಹಾಳಾಗಿವೆ. ನದಿ ಪಕ್ಕದಲ್ಲಿ ಕೆರೆ ನಿರ್ಮಿಸಿದರೂ ಅದನ್ನು ತುಂಬಿಸಿಲ್ಲ. ಶುದ್ಧ ನೀರಿನ ಘಟಕಗಳು ಕೆಟ್ಟು ನಿಂತು ಹಲವು ವರ್ಷಗಳಾಗಿವೆ.

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮೂಲಕ ₹ 381.64 ಕೋಟಿ ವೆಚ್ಚದಲ್ಲಿ 1,210 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 1,087 ಕಾಮಗಾರಿಗಳು ಪೂರ್ಣಗೊಂಡಿವೆ. 122 ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ.

ಜಲಜೀವನ ಮಿಷನ್ ಯೋಜನೆ ಅಡಿ ಜಿಲ್ಲೆಯ ಎಲ್ಲ ಗ್ರಾಮೀಣ ವಸತಿ ಪ್ರದೇಶಗಳು ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಾದ ಮಾನ್ವಿ, ಮಸ್ಕಿ, ಕವಿತಾಳ, ತುರ್ವಿಹಾಳ, ಬಳಗಾನೂರು, ಸಿರವಾರ ಹಾಗೂ ಹಟ್ಟಿ ಒಳಗೊಂಡು ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕಾಮಗಾರಿ ನಡೆಯುತ್ತಿದೆ.

ಶಂಕರ ನಾರಾಯಣ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್, ವೈಟಲ್ ಎನ್ವಿರಾನ್ಮೆಂಟ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆ್ಯಂಡ್ ಎಸ್ಪಿಎಂಎಲ್ ಕಂಪನಿ ಕಾಮಗಾರಿಯ ಗುತ್ತಿಗೆ ಪಡೆದುಕೊಂಡಿದೆ. 2022ರ ಜೂನ್ 4ರಂದು ಕರಾರು ಮಾಡಿಕೊಳ್ಳಲಾಗಿದೆ. ಕರಾರಿನ ಪ್ರಕಾರ 2024ರ ಡಿಸೆಂಬರ್ ಮೊದಲ ವಾರದಲ್ಲೇ ಕಾಮಗಾರಿ ಮುಗಿಸಬೇಕಿತ್ತು. ಅವಧಿ ಮುಗಿದು ಎರಡು ವರ್ಷ ಕಳೆದರೂ ಕಾಮಗಾರಿ ತೆವಳುತ್ತ ಸಾಗಿದೆ. ಇದೀಗ ಯೋಜನಾ ವೆಚ್ಚ ₹2,978 ಕೋಟಿ ದಾಟಿದೆ.

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು 2025ರ ಜುಲೈ 18ರಂದು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಸಿದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಶೇ 48.87ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಮಾಹಿತಿ ಒದಗಿಸಿದ್ದರು.

2026ರ ಫೆಬ್ರವರಿ 21ರಂದು ಸಂಸದ ಜಿ.ಕುಮಾರ ನಾಯಕ ನಡೆಸಿದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಂಡಿಸಿದ ವರದಿಯಲ್ಲಿ ಶೇ 53.35ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಲಿಖಿತ ಮಾಹಿತಿ ಒದಗಿಸಿದ್ದರು. ಆರು ತಿಂಗಳ ಅವಧಿಯಲ್ಲಿ ಶೇ 4.48 ರಷ್ಟು ಮಾತ್ರ ಪ್ರಗತಿ ಸಾಧಿಸಿರುವುದು ಅಂಕಿ–ಅಂಶಗಳೇ ಹೇಳುತ್ತಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-32-1891206072

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.