ರಾಯಚೂರು: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಬುಧವಾರ ಸಂಜೆ ನಗರದಲ್ಲಿ ವಿಶ್ವಕರ್ಮ ಸಮಾಜದ ಬೇಡಿಕೆಗಳಿಗೆ ಒತ್ತಾಯಿಸಿ ಪಂಜಿನ ಮೆರವಣಿಗೆ ನಡೆಸಲಾಯಿತು.

ನಗರದ ನೇತಾಜಿ ನಗರ ವೃತ್ತದಿಂದ ತೀನ್ ಕಂದೀಲ್, ಜಾಕಿರ್ ಹುಸೇನ್ ಸರ್ಕಲ್, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತದ ವರೆಗೆ ಪಂಜಿನ ಮೆರವಣಿಗೆಯು ನಡೆಯಿತು. ಸಮಾಜದ ಮುಖಂಡರು ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಆಗಮಿಸಿದ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ವಿಶ್ವಕರ್ಮ ಸಮಾಜವನ್ನು ಎಸ್ಸಿ ಪಟ್ಟಿಗೆ ಸೇರಿಸಬೇಕು. ಕುಲಶಾಸ್ತ್ರ ಅಧ್ಯಯನ ಪುನರ್ ಆಗಬೇಕು. ತಿಂಥಣಿ ಮೌನೇಶ್ವರ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಆಗಬೇಕು ಎಂದು ಒತ್ತಾಯಿಸಿದರು.

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷ ಮಾರುತಿ ಬಡಿಗೇರ ನೇತೃತ್ವ ವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬ್ರಹ್ಮ ಗಣೇಶ್, ಸೋಮಣ್ಣ ಸುಕಾಲಪೇಟೆ, ಜಿಲ್ಲಾ ಯುವ ಅಧ್ಯಕ್ಷ ಸುರೇಶ ಸಂಗಾಪುರ, ರಾಯಚೂರು ಜಿಲ್ಲಾ ವಿಶ್ವಕರ್ಮ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಉದಯಕುಮಾರ ಮಸ್ಕಿ ಜಿಲ್ಲಾ ಗೌರವಾಧ್ಯಕ್ಷರಾದ ಮಲ್ಲಪ್ಪ ದೇವದುರ್ಗ, ತಾಲ್ಲೂಕು ಘಟಕಗಳ ಪದಾದಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-32-482346097

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.