ರಾಯಚೂರು: ‘ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆಯನ್ನು ಖಾತ್ರಿಪಡಿಸಬೇಕು’ ಎಂದು ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಮುಖ್ಯ ಅಂಚೆ ಕಚೇರಿ ಬಳಿ ಪತ್ರ ಚಳವಳಿ ನಡೆಸಿದರು.‘ಮ್ಯಾಪಿಂಗ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ಮತ್ತು ವೇಳಾಪಟ್ಟಿಯನ್ನು ಸಾರ್ವಜನಿಕಗೊಳಿಸಬೇಕು. ಮ್ಯಾಪ್ ಆದ ಮತ್ತು ಆಗದ ಮತ ದಾರರ ವಿವರಗಳನ್ನು ಬಹಿರಂಗಪಡಿಸಬೇಕು’ ಎಂದು ಅವರು ಆಗ್ರಹಿಸಿದರು.‘ಜಾಗೃತಿ ಕಾರ್ಯಕ್ರಮಗಳು ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಬೇಕು. ಅಂಚಿನ ಸಮುದಾಯಗಳಿಗೆ ವಿಶೇಷ ಬೆಂಬಲ ನೀಡಬೇಕು. ಬಿಎಲ್ಒಗಳಿಗೆ ಸಮರ್ಪಕ ತರಬೇತಿ ಮತ್ತು ನ್ಯಾಯಯುತ ಸಂಭಾವನೆ ನೀಡಬೇಕು’ ಎಂದರು.

‘ಸುಪ್ರೀಂ ಕೋರ್ಟ್ನಲ್ಲಿ ಈ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಜಿಗಳು ವಿಚಾರಣೆ ಹಂತದಲ್ಲಿರುವ ಕಾರಣ ಅಂತಿಮ ತೀರ್ಪು ಬರುವ ತನಕ ಕರ್ನಾಟಕದಲ್ಲಿ ಎಸ್ಐಆರ್ ಜಾರಿಗೆ ತರಬಾರದು’ ಎಂದು ಆಗ್ರಹಿಸಿದರು. ಎಐಸಿಸಿಟಿಯು ಜಿಲ್ಲಾ ಘಟಕದ ಅಧ್ಯಕ್ಷ ಅಜೀಜ್ ಜಾಗೀರದಾರ್, ಮುಖಂಡ ರಾದ ಜಿಲಾನಿ ಯರಗೇರಾ, ಭೀಮಣ್ಣ, ನಿಸಾರ್ ಅಹಮದ್, ಜಗದೀಶ್, ಹನೀಫ್ ಅಬಕಾರಿ, ಮಹೇಂದ್ರ, ಮರಿಯಪ್ಪ, ಮಹೇಶ್, ಸಣ್ಣ ನರಸಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-32-955386703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.