ರಾಯಚೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಜಿಲ್ಲೆಯಲ್ಲಿ ಜೂನ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7ಕ್ಕೆ ಮುಕ್ತಾಯವಾಗಲಿದೆ’ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಎಸ್.ಪೂವಿತಾ ತಿಳಿಸಿದ್ದಾರೆ.

ಅಕ್ಟೋಬರ್ 1ನೇ ತಾರೀ ಖನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ, ಈ ವಿಶೇಷ ಸಮಗ್ರ ಮತದಾರರ ಪರಿಷ್ಕರಣೆ ಕಾರ್ಯ ನಡೆಯಲಿದೆ. ಜೂನ್ 20ರಿಂದ 29ರವರೆಗೆ ಈ ಪ್ರಕ್ರಿಯೆಯ ಸಿದ್ಧತೆ, ಅಧಿಕಾರಿಗಳು, ಸಿಬ್ಬಂದಿಗೆ ತರಬೇತಿ, ಅವಶ್ಯವಿರುವ ದಾಖಲೆಗಳ ಮುದ್ರಣ ಕಾರ್ಯ ನಡೆಯಲಿದೆ ಎಂದು ಹೇಳಿದ್ದಾರೆ.

ಜೂನ್ 30ರಿಂದ ಜುಲೈ 29 ರವರೆಗೆ 7 ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 1,853 ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ, ಮತದಾರರಿಗೆ ಎಣಿಕೆ ನಮೂನೆಗಳನ್ನು ನೀಡಿ ಮಾಹಿತಿ ಸಂಗ್ರಹಿಸುವರು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

ಆಗಸ್ಟ್ 5ರಂದು ಈ ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು.ಕರಡು ಮತದಾರರ ಪಟ್ಟಿಗೆ ಆಗಸ್ಟ್ 5ರಿಂದ ಸೆಪ್ಟೆಂಬರ್ 4 ರವರೆಗೆ ಆಕ್ಷೇಪಣೆ ಗಳನ್ನು ಆಹ್ವಾನಿಸಿ, ಅಕ್ಟೋಬರ್ 3 ರೊಳಗೆ ಆಕ್ಷೇಪಣೆಗಳನ್ನು ವಿಲೇವಾರಿ ಮಾಡಿ, ಅಕ್ಟೋಬರ್ 7ಕ್ಕೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-32-1090211368

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.